Advertisement

ಮುಂದಿನ ವರ್ಷ ಫೆಬ್ರವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ: ಪ್ರಮೋದ್ ಸಾವಂತ್

02:31 PM Jun 16, 2021 | Team Udayavani |

ಪಣಜಿ: ಗೋವಾ ವಿಧಾನಸಭಾ ಚುನಾವಣೆ 2022 ರ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ.

Advertisement

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಈ ಮಾಹಿತಿ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ರವರು ಕಳೆದ ನಾಲ್ಕು ದಿನಗಳ ಹಿಂದೆ ಗೋವಾಕ್ಕೆ ಭೇಟಿ ನೀಡಿ ಬಿಜೆಪಿ ಸ್ಥಳೀಯ ನಾಯಕರು ಮತ್ತು ಕೋರ್ ಕಮೀಟಿಯೊಂದಿಗೆ ಬೈಠಕ್ ನಡೆಸಿ ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಚರ್ಚಿಸಿದ್ದರು. ಇದಾದ ನಾಲ್ಕೇ ದಿನದಲ್ಲಿ ಮುಖ್ಯಮಂತ್ರಿ ಸಾವಂತ್ ರವರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಆರೋಗ್ಯ ತಪಾಸಣೆಗೆಂದು ಅಮೆರಿಕಾಕ್ಕೆ ತೆರಳಿದ ನಟ ರಜನಿಕಾಂತ್

ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಮತ್ತು ಬಿಜೆಪಿ  ಗೋವಾ ಪ್ರಭಾರಿ ಸಿಟಿ ರವಿ ರವರು ಗೋವಾಕ್ಕೆ ಆಗಮಿಸಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಮುಖ್ಯಮಂತ್ರಿ ಸಾವಂತ್- ಅಂದು ಗೋವಾ ವಿಧಾನಸಭಾ ಚುನಾವಣೆಯ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆಯಾಗಿದೆ. ಚುನಾವಣೆಗೆ ಇನ್ನು ಕೇವಲ 6 ತಿಂಗಳು ಮಾತ್ರ ಬಾಕಿ ಇದೆ. ನಾವು ರಾಜ್ಯದಲ್ಲಿ ಚುನಾವಣೆಯ ಪೂರ್ವ ಸಿದ್ಧತೆಯನ್ನು ಆರಂಭಿಸಿದ್ದೇವೆ. ನಮ್ಮ ಪಕ್ಷವು ಒಂದು ಸಂಘಟನೆಯಾಗಿ ಕೆಲಸ ನಿರ್ವಹಿಸುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next