Advertisement

ಗೋವಾ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ರೋಹನ್ ಖಂವಟೆ

05:10 PM Dec 15, 2021 | Team Udayavani |

ಪಣಜಿ: ಪರ್ವರಿ ಕ್ಷೇತ್ರದ ಪಕ್ಷೇತರ ಶಾಸಕ ರೋಹನ್ ಖಂವಟೆ ಬುಧವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಸಂಬಂಧ ಪತ್ರವನ್ನು ಸಭಾಪತಿ ರಾಜೇಶ್ ಪಾಟ್ನೇಕರ್ ರವರಿಗೆ ಸಲ್ಲಿಸಿದ್ದಾರೆ.

Advertisement

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರೋಹನ್ ಖಂವಟೆ ರವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬುದನ್ನು ಗೌಪ್ಯವಾಗಿಟ್ಟಿದ್ದಾರೆ.

ಸದ್ಯ ಗೋವಾ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ವಿವಿಧ ರಾಜಕೀಯ ಪಕ್ಷಗಳು ಕಾಲಿಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಆಟಿಕೆ ಅಂಗಡಿಗಳು ಬಂದಿವೆ. ಜನರಿಗೆ ಅವರು ಆಟಿಕೆಗಳನ್ನು ನೀಡಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದ ಜನತೆ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next