Advertisement

ಗೋವಾ-ಬೆಳಗಾವಿ ಮಾರ್ಗಕ್ಕೆ ಎಲೆಕ್ಟ್ರಿಕ್ ಬಸ್ ಆರಂಭಿಸಲು ಕರ್ನಾಟಕದಲ್ಲಿ ರಸ್ತೆ ಹದಗೆಟ್ಟಿದೆ

03:40 PM Oct 21, 2022 | Team Udayavani |

ಪಣಜಿ: ಕರ್ನಾಟಕ ರಾಜ್ಯದಲ್ಲಿ ರಸ್ತೆಗಳು ಹದಗೆಟ್ಟಿರುವ ಬಗ್ಗೆ ಕರ್ನಾಟಕ ರಾಜ್ಯದ ಜನತೆ ಮಾತ್ರವಲ್ಲದೆಯೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೂಡ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಭಾಗದ ರಸ್ತೆ ಹದಗೆಟ್ಟಿರುವ ಬಗ್ಗೆ ಮುಖ್ಯಮಂತ್ರಿ ಸಾವಂತ್ ಬೇಸರ ವ್ಯಕ್ತಪಡಿಸಿದ್ದು‌, ಗೋವಾ-ಬೆಳಗಾವಿ ಮಾರ್ಗಕ್ಕೆ ಗೋವಾ ಕದಂಬ ಸಾರಿಗೆಯ ಎಲೆಕ್ಟ್ರಿಕ್ ಬಸ್ ಓಡಾಟ ಆರಂಭಿಸಲು ಕರ್ನಾಟಕದಲ್ಲಿ ರಸ್ತೆ ಹದಗೆಟ್ಟಿದೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದ್ದಾರೆ.

Advertisement

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರಸ್ತೆಗಳು ಸಂಪೂರ್ಣ ಹಾಳಾಗಿದೆ. ಈ ಸಮಸ್ಯೆಯನ್ನು ಈಗಾಗಲೇ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ. ಮಳೆಗಾಲದ ನಂತರ ರಸ್ತೆ ದುರಸ್ತಿ ಕಾರ್ಯ ಆರಂಭಿಸಲಾಗುವುದು ಎಂದು ಬೊಮ್ಮಾಯಿ ಭರವಸೆ ನೀಡಿದ್ದಾರೆ. ಗೋವಾ ರಾಜ್ಯ ಸರ್ಕಾರವು ಇಂಧನ ವಾಹನಗಳ ಬದಲು ಎಲೆಕ್ಟ್ರಿಕ್ ಬಸ್ ಓಡಾಟ ಆರಂಭಿಸಲು ಮುಂದಾಗಿರುವ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು.

ಗೋವಾದಿಂದ ರಾಯಚೂರು, ಬೆಳಗಾವಿ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಎಲೆಕ್ಟ್ರಿಕ್ ಬಸ್ ಓಡಾಟ ಆರಂಭಿಸಲು ರಸ್ತೆ ಯೋಗ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next