Advertisement

ಬಾಂಬ್ ಬೆದರಿಕೆ: ಮಾಸ್ಕೋದಿಂದ ಬರುತ್ತಿದ್ದ ವಿಮಾನ ಜಾಮ್‌ನಗರದಲ್ಲಿ ತುರ್ತು ಭೂಸ್ಪರ್ಶ

11:23 PM Jan 09, 2023 | Team Udayavani |

ಜಾಮ್‌ನಗರ : ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನ ಜಾಮ್‌ನಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

Advertisement

ಗೋವಾ ಏರ್ ಟ್ರಾಫಿಕ್ ಕಂಟ್ರೋಲರ್‌ಗೆ ಬಾಂಬ್ ಬೆದರಿಕೆ ಬಂದ ನಂತರ 244 ಜನ ಪ್ರಯಾಣಿಕರಿದ್ದ ವಿಮಾನವನ್ನು ಗುಜರಾತ್‌ನ ಜಾಮ್‌ನಗರಕ್ಕೆ ತಿರುಗಿಸಲಾಯಿತು, ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಿಮಾನವು ಪ್ರತ್ಯೇಕ ಸ್ಥಳದಲ್ಲಿದೆ ಎಂದು ಜಾಮ್‌ನಗರ ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ಅಧಿಕಾರಿಗಳು ಉನ್ನತ ಮಟ್ಟದ ತನಿಖೆಯನ್ನು ಆರಂಭಿಸಿದ್ದು, ಯಾರು ಬೆದರಿಕೆ ಹಾಕಿದ್ದಾರೆ. ವಿಮಾನದಲ್ಲಿದ್ದ ಪ್ರಯಾಣಿಕರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಾಥಮಿಕ ವರದಿಯಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next