ಪಣಜಿ: ಗೋವಾದ ಮುಖ್ಯಮಂತ್ರಿಯಾಗಿ ಬಿಜೆಪಿಯ ಪ್ರಮೋದ್ ಸಾವಂತ್ ಅವರು ಪ್ರಮಾಣ ವಚನ ಸ್ವೀಕರಿಸಿರುವ ಬೆನ್ನಲ್ಲೇ ರಾಜ್ಯದ ಜನರಿಗೆ ಉಡುಗೊರೆಯೊಂದನ್ನು ನೀಡಿದ್ದಾರೆ. ಪ್ರತೀ ಕುಟುಂಬಕ್ಕೂ ವರ್ಷಕ್ಕೆ ಮೂರು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಉಚಿತವಾಗಿ ಕೊಡುವುದಾಗಿ ಘೋಷಿಸಿದ್ದಾರೆ.
ಸೋಮವಾರ ನೂತನ ಸಂಪುಟದ ಮೊದಲ ಸಭೆ ನಡೆಸಿದ ಅವರು ಈ ಘೋಷಣೆ ಮಾಡಿದ್ದಾರೆ. ಹಾಗೆಯೇ ಕಬ್ಬಿಣದ ಅದಿರು ಗಣಿಗಾರಿಕೆಯನ್ನು ಪುನರಾರಂಭಿಸಿ ಉದ್ಯೋಗಾವಕಾಶ ಕಲ್ಪಿಸುವುದಾಗಿಯೂ ತಿಳಿಸಿದ್ದಾರೆ.
“”ಈ ಬಾರಿ ನಾನು “ಸೆಲೆಕ್ಟೆಡ್’ ಮುಖ್ಯಮಂತ್ರಿಯಲ್ಲ “ಎಲೆಕ್ಟೆಡ್’ ಮುಖ್ಯಮಂತ್ರಿ” ಎಂದಿರುವ ಅವರು ಬಿಜೆಪಿಯು ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಎಲ್ಲ ಆಶ್ವಾಸನೆಗಳನ್ನು ಪೂರ್ಣಗೊಳಿಸುವುದಾಗಿ ನುಡಿದಿದ್ದಾರೆ.
ಇದನ್ನೂ ಓದಿ:ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ ಗೆಲುವು
ಇದೇ ವೇಳೆ ಗೋವಾದ ಎಲೆಕ್ಷನ್ ವಾಚ್ ಮತ್ತು ಅಸೋಸಿಯೇಶನ್ ಫಾರ್ ಡೆಮಾಕ್ರಾಟಿಕ್ ರಿಫಾಮ್ಸ್ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಪ್ರಮಾಣ ಸ್ವೀಕರಿಸಿರುವ ಸಚಿವರ ಪೈಕಿ ಶೇ.44 ಸಚಿವರು ವಿವಿಧ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದೆ.