Advertisement

ಮುಂಗಾರು ಅಧಿವೇಶನದಲ್ಲಿ ಯುಸಿಸಿ ಜಾರಿಗೆ ಸಿದ್ಧತೆ; ಪ್ರಮೋದ್ ಸಾವಂತ್

03:18 PM Jul 01, 2023 | Team Udayavani |

ಪಣಜಿ: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಲೋಕಸಭೆಯಲ್ಲಿ ಭಾರತೀಯ ಜನತಾ ಪಕ್ಷ ಮಾತ್ರ ಬಹುಮತ ಹೊಂದಿದೆ. ಹಾಗಾಗಿ ಲೋಕಸಭೆಯಲ್ಲಿ ಮಸೂದೆ ಅಂಗೀಕಾರಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಏಕರೂಪ ನಾಗರಿಕ ಕಾನೂನು ವಿಚಾರವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದ ದೇಶದಲ್ಲೇ ಮೊದಲ ರಾಜ್ಯ ಗೋವಾ ಎಂಬ ಹೆಗ್ಗಳಿಕೆ ನಮಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಆದರೆ ಅದನ್ನು ಹೇಗೆ ಮತ್ತು ಯಾವಾಗ ಜಾರಿಗೊಳಿಸಬೇಕು ಎಂಬುದು ಕೇಂದ್ರ ಸರ್ಕಾರಕ್ಕೆ ಬಿಟ್ಟದ್ದು. “ಸಮಾನ ನಾಗರಿಕ ಕಾನೂನು ಜನನ, ಮರಣ ಮತ್ತು ವಿವಾಹಗಳ ನೋಂದಣಿಯನ್ನು ಕಡ್ಡಾಯಗೊಳಿಸಿದೆ. ಈ ಎಲ್ಲಾ ನೋಂದಣಿಗಳನ್ನು ಗೋವಾದಲ್ಲಿ ಮಾಡಲಾಗುತ್ತದೆ, ಇದು ಅಲ್ಪಸಂಖ್ಯಾತರಿಗೆ ಅಥವಾ ಯಾವುದೇ ಸಮುದಾಯಕ್ಕೆ ಹಾನಿಯಾಗುವುದಿಲ್ಲ. ಮಹಿಳಾ ಸಬಲೀಕರಣ ಮತ್ತು ಲಿಂಗ ಸಮಾನತೆಗೆ ಸಮಾನ ನಾಗರಿಕ ಕಾನೂನು ಬಹಳ ಮುಖ್ಯವಾಗಿದೆ.” ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.

“ಇತ್ತೀಚೆಗೆ ಸಮಾಜವಾದಿ ಪಕ್ಷಗಳು ಮತ್ತು ಕಾಂಗ್ರೆಸ್ ಒಂದೇ ನಾಗರಿಕ ಕಾನೂನಿನ ವಿಷಯದಲ್ಲಿ ರಾಜಕೀಯ ಮಾಡುತ್ತಿವೆ, ರಾಜಕೀಯ ಮಾಡುವ ಪಕ್ಷಗಳು ಮಹಿಳಾ ಸಬಲೀಕರಣ ಮತ್ತು ಲಿಂಗ ಸಮಾನತೆಯನ್ನು ಬಯಸುವುದಿಲ್ಲ, ಈ ಕಾನೂನು ಜಾತಿ ಅಥವಾ ಧರ್ಮವನ್ನು ಆಧರಿಸಿಲ್ಲ, ಈ ಕಾನೂನನ್ನು ವಿರೋಧಿಸುವವರು ಕಾನೂನನ್ನು ಅರ್ಥಮಾಡಿಕೊಳ್ಳಬೇಕು. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯ ಅಗತ್ಯದ ಬಗ್ಗೆ ಮಾತನಾಡಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಮತ್ತು ಕೇಂದ್ರ ಸರ್ಕಾರ ಏಕರೂಪ ನಾಗರಿಕ ಸಂಹಿತೆ ತರಲು ಪ್ರಯತ್ನಿಸುತ್ತಿರುವುದು ಒಳ್ಳೆಯದು, ಅದನ್ನು ದೇಶದಲ್ಲಿ ಶೀಘ್ರವಾಗಿ ಜಾರಿಗೆ ತರಲಿ ” ಎಂದು ಹೇಳಿದರು.

“ಕಳೆದ 60 ವರ್ಷಗಳಲ್ಲಿ ಗೋವಾದಲ್ಲಿ ಸಮಾನ ನಾಗರಿಕ ಕಾನೂನಿನ ಬಗ್ಗೆ ಎಂದಿಗೂ ವಿವಾದಗಳಿಲ್ಲ. ಅಲ್ಲದೆ, ಪೋಷಕರ ಮರಣದ ನಂತರ, ಹುಡುಗ ಮತ್ತು ಹುಡುಗಿಯರಿಬ್ಬರೂ ಅವರ ಆಸ್ತಿಯಲ್ಲಿ ಸಮಾನ ಹಕ್ಕುಗಳನ್ನು ಪಡೆಯುತ್ತಾರೆ. ಅದಕ್ಕಾಗಿಯೇ ಸಮಾನ ನಾಗರಿಕ ಕಾನೂನು ಮಹಿಳಾ ಸಬಲೀಕರಣ ಮತ್ತು ಲಿಂಗ ಸಮಾನತೆ ಅಗತ್ಯ  ಎಂದು  ಅಭಿಪ್ರಾಯಪಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next