Advertisement
ಪಣಜಿಯಲ್ಲಿ ಆಯೋಜಿಸಿದ್ದ ಸಚಿವ ಸಂಪುಟ ಸಭೆಯಲ್ಲಿ- 18 ಕಾನೂನು ತಿದ್ದುಪಡಿಗಳನ್ನು ಒಳಗೊಂಡಂತೆ 35 ಪ್ರಸ್ತಾವನೆಗಳನ್ನು ಅನುಮೋದಿಸಿತು. ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ಹೊಸ ಪಾರದರ್ಶಕ ಮತ್ತು ಹೂಡಿಕೆ ಉತ್ತೇಜಕ ಕೈಗಾರಿಕಾ ನೀತಿಯ ಅಗತ್ಯವಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಹೊಸ ನೀತಿಯನ್ನು ರೂಪಿಸಲಾಗಿದೆ. ‘ರಾಜ್ಯದಲ್ಲಿ ಹೊಸ ಕೈಗಾರಿಕೆ ನೀತಿ ಜಾರಿಯಾದ ನಂತರ ಮುಂದಿನ ಐದು ವರ್ಷಗಳಲ್ಲಿ 30 ಸಾವಿರ ಉದ್ಯೋಗಾವಕಾಶ ಲಭ್ಯವಾಗಲಿದ್ದು, ಸುಮಾರು 20 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.
Related Articles
Advertisement
ಹೊಸ ಕಾಯ್ದೆಯಲ್ಲಿ ಪತ್ರಕರ್ತರ ಸಂರಕ್ಷಣಾ ಕಾಯ್ದೆ ಅನುಷ್ಠಾನಕ್ಕೆ ಒತ್ತು ನೀಡಲಾಗುವುದು. ಈ ಕಾಯ್ದೆಗೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಈ ಹೊಸ ಕಾನೂನಿನ ಪ್ರಕಾರ, ಪತ್ರಕರ್ತರ ಮೇಲೆ ಹಲ್ಲೆ ನಡೆಸುವವರನ್ನು ಜಾಮೀನು ರಹಿತವಾಗಿ ಬಂಧಿಸಲಾಗುತ್ತದೆ ಮತ್ತು ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.