ಪಣಜಿ: ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರು ಉತ್ತರಾಖಂಡ್ ಪ್ರವಾಸದಲ್ಲಿದ್ದು, ಅಲ್ಲಿನ ಸಂತರನ್ನು ಭೇಟಿ ಮಾಡಿದ್ದಾರೆ. ಗೋವಾದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಾವಂತ್ ಅವರು ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇಲ್ಲಿನ ಪತಂಜಲಿ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್, “ದೇವರ ನಾಡಿಗೆ ಬಂದ ನಂತರ ನನಗೆ ತುಂಬಾ ಸಂತೋಷವಾಗಿದೆ. ನಾನು ಮೊದಲು ಪತಂಜಲಿ ತಲುಪಿದೆ. ಯೋಗ ಗುರು ಬಾಬಾ ರಾಮ್‍ದೇವ್ ಅವರನ್ನು ಭೇಟಿ ಮಾಡಿದ್ದೇನೆ. ಯೋಗಾಸನದ ಜೊತೆಗೆ ಯೋಗಾಸನ ಸಂಶೋಧನಾ ಕೇಂದ್ರಕ್ಕೂ ಭೇಟಿ ನೀಡಿದ್ದೇನೆ. ಯೋಗ ಉತ್ಸವವು ಗೋವಾದಲ್ಲಿ ಫೆಬ್ರವರಿ 18, 19 ಮತ್ತು 20 ರಂದು ಗೋವಾದ ಮಿರಾಮರ್ ಬೀಚ್‍ನಲ್ಲಿ ನಡೆಯಲಿದೆ. ಇದಕ್ಕಾಗಿ ಯೋಗ ಗುರು ಬಾಬಾ ರಾಮದೇವ್ ಅವರನ್ನು ಆಹ್ವಾನಿಸಲಾಗಿದೆ. “ನಾವು ಗೋವಾವನ್ನು ಆಧ್ಯಾತ್ಮಿಕ ಪ್ರವಾಸೋದ್ಯಮದೊಂದಿಗೆ ಸಂಪರ್ಕಿಸಲು ಬಯಸುತ್ತೇವೆ. ಗೋವಾದಲ್ಲಿ ಸಮುದ್ರ ಪ್ರವಾಸೋದ್ಯಮ ಈಗಾಗಲೇ ಅಸ್ತಿತ್ವದಲ್ಲಿದೆ. ನಾವು ಗೋವಾದಲ್ಲಿ ಆಧ್ಯಾತ್ಮಿಕ ಆರೋಗ್ಯ ಮತ್ತು ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಯಸುತ್ತೇವೆ” ಎಂದು ಜುನಾ ಅಖಾರಾದ ಆಚಾರ್ಯ ಮಹಾಮಂಡಲೇಶ್ವರ ಅವಧೇಶಾನಂದ ಗಿರಿಯನ್ನು ಭೇಟಿಯಾದ ನಂತರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಭೇಟಿಯ ಚಿತ್ರಗಳನ್ನೂ ಮುಖ್ಯಮಂತ್ರಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಬಿಡುಗಡೆ ಮಾಡಿದ್ದಾರೆ. ಈ ಭೇಟಿಯಲ್ಲಿ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಶೈಕ್ಷಣಿಕ ಮೂಲಸೌಕರ್ಯ ಮತ್ತು ಶಿಕ್ಷಣ ವ್ಯವಸ್ಥೆಯಿಂದ ಪ್ರಭಾವಿತನಾಗಿದ್ದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಗುರುಕುಲಂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿಗಳಲ್ಲಿ ಇದ್ದ ಉತ್ಸಾಹ, ಶ್ರದ್ಧೆ ಕಂಡು ಖುಷಿಯಾಯಿತು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.