Advertisement

ಎಕ್ಸಿಟ್ ಪೋಲ್ ಫಲಿತಾಂಶ ಏನೇ ಬಂದರೂ ಗೋವಾದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆ ಖಚಿತ:ಸಿಎಂ ಸಾವಂತ್

05:38 PM Mar 09, 2022 | Team Udayavani |

ಪಣಜಿ: ಎಕ್ಸಿಟ್ ಪೋಲ್ ಫಲಿತಾಂಶ ಏನೇ ಬಂದರೂ ಗೋವಾದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸಿಟ್ ಪೋಲ್ ಅಂಕಿಅಂಶಗಳು ಸಂಪೂರ್ಣ ನಿಜವಲ್ಲ, ಅವು ಊಹಿಸಬಹುದಾದವು. ಹಾಗಾಗಿ ಎಕ್ಸಿಟ್ ಪೋಲ್ ಅಂಕಿ ಅಂಶಗಳು ಸುಳ್ಳಾಗಲಿದ್ದು ಗೋವಾದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಫಲಿತಾಂಶದಲ್ಲಿ ನಮಗೆ ಯಾವುದೇ ಭಯವಿಲ್ಲ. ಏಕೆಂದರೆ ನಾವು ಗೋವಾದಲ್ಲಿ ಉತ್ತಮ ಅಭಿವೃದ್ದಿ ಕಾರ್ಯ ಕೈಗೊಂಡಿದ್ದೇವೆ. ಹಾಗಾಗಿ ಗೋವಾದ ಜನತೆ ನಮ್ಮನ್ನು ಆಯ್ಕೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದರು.

ಗೋವಾದಲ್ಲಿ ಕಾಂಗ್ರೆಸ್ ರೆಸಾರ್ಟ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಮನಸ್ಸಿನಲ್ಲಿ ಸೋಲಿನ ಭಯವಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವುಯ ತನ್ನ ಅಭ್ಯರ್ಥಿಗಳನ್ನು ರೆಸಾರ್ಟ್ ನಲ್ಲಿ ಬಚ್ಚಿಟ್ಟಿದೆ ಎಂದು ಮುಖ್ಯಮಂತ್ರಿ ಸಾವಂತ್ ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next