Advertisement

Goa: ಒನ್ ನೇಷನ್ ಒನ್ ಎಲೆಕ್ಷನ್ ಪರಿಕಲ್ಪನೆಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಬೆಂಬಲ

06:02 PM Sep 14, 2023 | Team Udayavani |

ಪಣಜಿ:  ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಒನ್ ನೇಷನ್ ಒನ್ ಎಲೆಕ್ಷನ್ ಪರಿಕಲ್ಪನೆಯನ್ನು ಬೆಂಬಲಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ಜತೆಗೆ ಗೋವಾದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿ ಸಿದ್ಧ ಎಂದರು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

Advertisement

ಗ್ವಾಲಿಯರ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಾವಂತ್ ಅವರಿಗೆ ಒನ್ ನೇಷನ್ ಒನ್ ಚುನಾವಣೆ ಕುರಿತು ಪ್ರಶ್ನೆಗಳನ್ನು ಕೇಳಲಾಯಿತು. ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳು ದೇಶದ ಪ್ರಗತಿಯ ಮೇಲೆ ಪರಿಣಾಮ ಬೀರುತ್ತಿವೆ ಎಂಬ ಪರಿಕಲ್ಪನೆಯನ್ನು ಮುಖ್ಯಮಂತ್ರಿ ಸಾವಂತ್ ಬೆಂಬಲಿಸಿದರು. ರಾಜ್ಯ ಮತ್ತು ದೇಶದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಒಂದು ದೇಶ ಒಂದು ಚುನಾವಣೆ ಪರಿಕಲ್ಪನೆ ಸಾಕಾರಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಅಂತ್ಯೋದಯ ತತ್ವದಡಿ ಕೆಲಸ ಮಾಡುತ್ತಿದ್ದಾರೆ. ನಾವು ಗೋವಾದಲ್ಲಿ ಅದೇ ತತ್ವದ ಮೇಲೆ ಕೆಲಸ ಮಾಡುತ್ತಿದ್ದೇವೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next