Advertisement

Panaji: ನಮ್ಮ ಎದುರಾಳಿ ಅಭ್ಯರ್ಥಿ ಯಾರೇ ಆದರೂ ನಮ್ಮ ಗೆಲುವು ಖಚಿತ: ಗೋವಾ ಸಿಎಂ

03:23 PM Apr 08, 2024 | Team Udayavani |

ಪಣಜಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರು? ಇದು ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಇನ್ನೊಂದೆಡೆ ಗೋವಾದ ಉತ್ತರ ಮತ್ತು ದಕ್ಷಿಣ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಗೋವಾದ ಮುಳಗಾಂವ್-ಬಿಚೋಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು- ನನ್ನ ವಿಧಾನಸಭಾ ಕ್ಷೇತ್ರವಾದ ಸಾಖಳಿ ಒಳಗೊಂಡಿರುವ ಬಿಚೋಳಿ ತಾಲೂಕಿನ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್ಚು ಮತ ಪಡೆಯುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಕಾರ್ಯಕರ್ತರ ಬಲ ಹಾಗೂ ಜನರ ಆಶೀರ್ವಾದದಿಂದ ಗೋವಾದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಯ ಕಮಲ ಅರಳುವುದು ಖಚಿತ ಎಂದು ಮುಖ್ಯಮಂತ್ರಿ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದರು. ಉತ್ತರದಿಂದ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದು ಶ್ರೀಪಾದ್ ನಾಯ್ಕ್ ಗೆಲುವು ಸಾಧಿಸಿದರೆ, ದಕ್ಷಿಣದಿಂದ ಪಲ್ಲವಿ ದೆಂಪೆ ಅವರು 60 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Tollywood: ಬಿಗ್‌ ಬಜೆಟ್‌ ʼಕಣ್ಣಪ್ಪʼ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅಕ್ಷಯ್‌ ಕುಮಾರ್

Advertisement

Udayavani is now on Telegram. Click here to join our channel and stay updated with the latest news.

Next