ಪಣಜಿ: 45 ವರ್ಷಕ್ಕೂ ಮೇಲ್ಪಟ್ಟ ನಾಗರೀಕರಿಗೆ ನೀಡಲಾದ ಕೋವಿಡ್ ಲಸಿಕೆಯ ಕೋಟಾವನ್ನು 18-44 ವರ್ಷದ ಒಳಗಿನ ನಾಗರೀಕರಿಗೆ ಬಳಸಲು ಅನುಮತಿಸುವಂತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ವ್ಯಾಕ್ಸಿನ್ ಕೋಟಾವನ್ನು ಸಾಲದ ರೂಪದಲ್ಲಿ ಬಳಸಲಾಗುವುದು ಎಂದು ಕೇಂದ್ರಕ್ಕೆ ಬರೆದಿರುವ ಪತ್ರದಲ್ಲಿ ನಮೂದಿಸಲಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ವಿಶ್ವ ಆರೋಗ್ಯ ಸಂಸ್ಥೆಯಿಂದ ನೂರು ಆಕ್ಸಿಜನ್ ಕಾನ್ಸನ್‌ಟ್ರೇಟರ್ಸ್ ಕೊಡುಗೆ
ಪಣಜಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಾವಂತ್, ರಾಜ್ಯದಲ್ಲಿ 17 ವರ್ಷಕ್ಕಿಂತ ಕಡಿಮೆ ವಯಸ್ಸಿನ 16,226 ಜನ ಮಕ್ಕಳಲ್ಲಿ ಈಗಾಗಲೇ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ 7 ಜನ ಮಕ್ಕಳನ್ನು ಕೋವಿಡ್ ಬಲಿ ಪಡೆದಿದೆ. ಮಕ್ಕಳಲ್ಲಿ ಈಗಾಗಲೇ ಕೋವಿಡ್ ಸೋಂಕು ತಗುಲಲು ಆರಂಭಿಸಿದೆ ಎಂದು ಅವರು ಹೇಳಿದ್ದಾರೆ.
ಇನ್ನು, ರಾಜ್ಯದಲ್ಲಿ ಕೋವಿಡ್ ಮೂರನೇಯ ಅಲೆಯನ್ನು ನಿಭಾಯಿಸಲು ಆರೋಗ್ಯ ಕಾರ್ಯಕರ್ತರು ಮತ್ತು ಸಂಬಂಧಿತ ಸಿಬ್ಬಂಧಿಗಳಿಗೆ ತರಬೇತಿ ನೀಡಲು ಆರಂಭಿಸಲಾಗಿದೆ. ಅಗತ್ಯ ಬಿದ್ದಲ್ಲಿ ಕೋವಿಡ್ ಆಸ್ಪತ್ರೆಯನ್ನು ಮಕ್ಕಳ ಆಸ್ಪತ್ರೆಯಾಗಿ ಪರಿವರ್ತಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಕೋವಿಡ್ ವಿರುದ್ಧ ಹೋರಾಡಿ ಪೋಷಕರನ್ನು ಬದುಕಿಸಿಕೊಂಡ ನಟ ದುನಿಯಾ ವಿಜಯ್