Advertisement

ಗೋವಾ ವಿ.ಸ ಚುನಾವಣೆಯಲ್ಲಿ ಬಿಜೆಪಿ ಜೊತೆ ಎಂಜಿಪಿ ಮೈತ್ರಿ ಸಾಧ್ಯತೆಯ ಸುಳಿವು ನೀಡಿದ ಧವಳೀಕರ್

01:39 PM Aug 22, 2021 | Team Udayavani |

ಪಣಜಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಮಂತ್ರಿ ಶ್ರೀಪಾದ ನಾಯ್ಕ ರವರ ಬಗ್ಗೆ ನಮಗೆ ಗೌರವವಿದೆ. ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಎಂಜಿಪಿ ಮೈತ್ರಿ ಮಾಡಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಎಂಜಿಪಿ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆಯೇ ಅಥವಾ ಇಲ್ಲವೇ ಎಂಬುದನ್ನು ನಾನು ಹೇಳಲು ಸಾಧ್ಯವಿಲ್ಲ.  ಎಂಜಿಪಿ ಪಕ್ಷದ ಕೇಂದ್ರ ಸಮೀತಿ ಈ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಎಂಜಿಪಿ ಪಕ್ಷದ ನಾಯಕ ಸುದೀನ ಧವಳೀಕರ್ ನುಡಿದರು. ಈ ಮೂಲಕ ಪ್ರಸಕ್ತ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಸಾಧ್ಯತೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

Advertisement

ಪಣಜಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಧವಳೀಕರ್-ಕೇಂದ್ರ ಸಚಿವ ಶ್ರೀಪಾದ ನಾಯ್ಕ ರವರು ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಎಂಜಿಪಿ ಮೈತ್ರಿ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಂಜಿಪಿ ಪಕ್ಷದ ಕೇಂದ್ರ ಹಾಗೂ ರಾಜ್ಯ ಕಾರ್ಯಕಾರಿಣಿಯು ಮೈತ್ರಿಗೆ ಸಂಬಂಧಿಸಿದ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಧವಳೀಕರ್ ನುಡಿದರು.

ತಮಿಳುನಾಡು ಬಿಜೆಪಿ ನಾಯಕ ಎಲ್.ಗಣೇಶನ್ ಮಣಿಪುರ ರಾಜ್ಯಪಾಲರಾಗಿ ನೇಮಕ

ಸದ್ಯ ಎಂಜಿಪಿ ಪಕ್ಷವು ರಾಜ್ಯದ 12 ಕ್ಷೇತ್ರಗಳಲ್ಲಿ ಉಮೇದುವಾರರನ್ನು ಆಯ್ಕೆ ಮಾಡಿದೆ, ಇನ್ನೂ 6 ಕ್ಷೇತ್ರಗಳಲ್ಲಿ ಉಮೇದುವಾರರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ ಕೆಲ ಕ್ಷೇತ್ರಗಳಲ್ಲಿ ಪಕ್ಷೇತರರಿಗೆ ಬೆಂಬಲ ನೀಡಲಾಗುವುದು. ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಎಂಜಿಪಿ ಪಕ್ಷದ 21 ಸ್ಥಾನಗಳ ಪೂರ್ಣ ಬಹುಮತ ಲಭಿಸಿದೆ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಾಗುವುದು ಎಂದು ಧವಳೀಕರ್ ನುಡಿದರು.  ಪತ್ರಿಕಾಗೋಷ್ಠಿಯಲ್ಲಿ ಎಂಜಿಪಿ ಪಕ್ಷದ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next