ಪಣಜಿ: ಗೋವಾ ಸರ್ಕಾರವು ರಾಜ್ಯಾದ್ಯಂತ ಕರ್ಫ್ಯೂ ಕಾಲಾವಧಿಯನ್ನು ಇನ್ನೂ 7 ದಿನಗಳ ಕಾಲ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಮದುವೆ ಸಮಾರಂಭಗಳನ್ನು 50 ಜನರ ಉಪಸ್ಥಿತಿಯಲ್ಲಿ ನಡೆಸಲು ಪರವಾನಗಿ ನೀಡಲಾಗಿದೆ. ಪಂಚಾಯತ್, ಪಾಲಿಕೆ ಮಾರ್ಕೆಟ್ ಅಂಗಡಿ ಮುಂಗಟ್ಟುಗಳನ್ನು ಬೆಳಿಗ್ಗೆ 7 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕರೀನಾ ವಿರುದ್ಧ ಕೆರಳಿಸಿದ ನೆಟ್ಟಿಜನ್.. Boycottkhareenakhan ಶುರುವಾಗಲು ಕಾರಣ ಏನು ?
ರಾಜ್ಯದಲ್ಲಿ ಕಫ್ರ್ಯೂ ಕಾಲಾವಧಿ ಜೂನ್ 14 ರಂದು ಮುಕ್ತಾಯಗೊಳ್ಳುತ್ತಿತ್ತು, ಇದನ್ನು ಇದೀಗ ಸರ್ಕಾರವು 7 ದಿನಗಳ ಕಾಲ ವಿಸ್ತರಣೆ ಮಾಡಿದ್ದು, ಕೆಲ ವಿನಾಯತಿಗಳನ್ನು ನೀಡಿದೆ. ರಾಜ್ಯದಲ್ಲಿ ಜೂನ್ 21 ರ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.
ಕಳೆದ ವಾರ ಕರ್ಫ್ಯೂ ವಿಸ್ತರಣೆ ಮಾಡುವಾಗ ಸರ್ಕಾರವು ಮಳೆಗಾಲದ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿತ್ತು. ಇದೀಗ ಪ್ರಸಕ್ತ ಬಾರಿ ಕಫ್ರ್ಯೂ ವಿಸ್ತರಣೆ ಮಾಡುವ ಸಂದರ್ಭದಲ್ಲಿ 50 ಜನರ ಉಪಸ್ಥಿತಿಯಲ್ಲಿ ರಾಜ್ಯದಲ್ಲಿ ಮದುವೆ ಸಮಾರಂಭಗಳನ್ನು ನಡೆಸಲು ಸರ್ಕಾರ ಅನುಮತಿ ನೀಡಿದೆ.