Advertisement
ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗೋವಾ ಮುಖ್ಯಮಂತ್ರ ಪ್ರಮೋದ್ ಸಾವಂತ್, ಕೋವಿಡ್ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವುದರಿಂದ ಕರ್ಫ್ಯೂವನ್ನು ವಿಸ್ತರಣೆ ಮಾಡಲು ಸಂಪುಟ ಸಭೆ ನಿರ್ಧರಿಸಿದ್ದು, ಈ ಕರ್ಫೂ ಮೇ 31 ರ ತನಕ ಮುಂದುವರಿಯಲಿದ್ದು, ಯಾವುದೇ ನಿರ್ಬಂಧಗಳ ಬದಲಾವಣೆ ಇಲ್ಲದೆ ಹಿಂದಿನ ಮಾರ್ಗ ಸೂಚಿಯಂತೆ ಕರ್ಫೂ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದ್ದಾರೆ.
Related Articles
ಈ ಮೊದಲು ಗೋವಾದಲ್ಲಿ ಮೇ 9 ರಿಂದ 15 ದಿನಗಳ ಕಾಲ ಕರ್ಫ್ಯೂ ವಿಧಿಸಲಾಗಿತ್ತು. ವೈದ್ಯಕೀಯ ತುರ್ತು ಸೇವೆಗಳನ್ನು ಸೇರಿ, ಕಿರಾಣಿ ಅಂಗಡಿಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಮಳಿಗೆಗಳಿಗೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ತೆರೆದಿರಲು ಅವಕಾಶ ನೀಡಲಾಗಿತ್ತು. ರೆಸ್ಟೋರೆಂಟ್ ಗಳನ್ನು ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ತೆರೆದಿರಲು ಅನುಮತಿಸಲಾಗಿತ್ತು.
Advertisement
ಹಿಂದಿನ ಮಾರ್ಗ ಸೂಚಿಯಂತೆಯೇ ಕರ್ಫ್ಯೂ ಮುಂದುವರಿಯುತ್ತದೆ. ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಗಳು ಮತ್ತು ಇತರ ಸಭೆಗಳು ಮಾಡುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಸರ್ಕಾರ ಹೇಳಿದೆ.
ಇನ್ನು, ಕಳೆದ 24 ಗಂಟೆಗಳಲ್ಲಿ 1,582 ಹೊಸ ಕೋವಿಡ್ -19 ಹೊಸ ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗುವುದರ ಮೂಲಕ ಒಟ್ಟು ಈವರೆಗೆ ದಾಖಲಾದ ಸೋಂಕಿತರ ಸಂಖ್ಯೆ 1,41,567 ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ ಒಟ್ಟು 2,272ಕ್ಕೆ ತಲುಪಿದೆ ಎಂದು ಗೋವಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ : ಕೋವಿಡ್ ವಿರುದ್ಧ ದೀರ್ಘ ಹೋರಾಟ ನಡೆಸಬೇಕು, ಬ್ಲ್ಯಾಕ್ ಫಂಗಸ್ ದೊಡ್ಡ ಸವಾಲು:ಪ್ರಧಾನಿ ಮೋದಿ