ಪಣಜಿ: ಗೋವಾದ ಶಿರೋಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ವೈದ್ಯಾಧಿಕಾರಿ ಅಕ್ಷಯಾ ಪಾವಸ್ಕರ್ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಪಾವಸ್ಕರ್ ಆಸ್ಪತ್ರೆಯಲ್ಲಿ ಏಕಾಏಕಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಅಕ್ಷಯಾಗೆ 38 ವರ್ಷ ವಯಸ್ಸಾಗಿತ್ತು. ಯುವ ವೈದ್ಯಾಧಿಕಾರಿಯ ಹಠಾತ್ ನಿಧನಕ್ಕೆ ವೈದ್ಯಕೀಯ ಕ್ಷೇತ್ರದ ವೈದ್ಯಕೀಯ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
ಮೂಲಗಳ ಪ್ರಕಾರ ಅಕ್ಷಯಾ ಪಾವಸ್ಕರ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅಕ್ಷಯಾ ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಅವರ ಸಾವಿನ ಪ್ರಾಥಮಿಕ ಅಂದಾಜಿನ ಪ್ರಕಾರ ಹೃದಯ ಸ್ತಂಭನವಾಗಿದ್ದು, ಶವಪರೀಕ್ಷೆಯ ನಂತರ ನಿಖರವಾದ ಕಾರಣವನ್ನು ಬಹಿರಂಗಪಡಿಸುವ ನಿರೀಕ್ಷೆಯಿದೆ.
ಘಟನೆ ಬಗ್ಗೆ ರಾಜ್ಯ ಆರೋಗ್ಯ ಸಚಿವ ವಿಶ್ವಜೀತ್ ರಾಣೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಹಿಳಾ ವೈದ್ಯರ ಸಾವಿಗೆ ನಿಖರ ಕಾರಣದ ಬಗ್ಗೆಯೂ ಇಲಾಖೆ ತನಿಖೆ ನಡೆಸಲಿದೆ ಎಂದರು.