ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಗೋವಾ ಫಾರ್ವಾರ್ಡ್ ಪಕ್ಷವು ಕಾಂಗ್ರೇಸ್ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲಿದೆ. ಇದಕ್ಕೆ ಕಾಂಗ್ರೇಸ್ ಹೈಕಮಾಂಡ ಮಾನ್ಯತೆ ಲಭಿಸಿದೆ ಎಂದು ಗೋವಾ ಕಾಂಗ್ರೇಸ್ ಪ್ರಭಾರಿ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ ಎಂದು ಗೋವಾ ಫಾರ್ವಾರ್ಡ್ ಪಕ್ಷದ ಅಧ್ಯಕ್ಷ ವಿಜಯ್ ಸರ್ದೇಸಾಯಿ ಮಾಹಿತಿ ನೀಡಿದ್ದಾರೆ.
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ಕಾಂಗ್ರೇಸ್ ಗೋವಾ ಪ್ರಭಾರಿ ದಿನೇಶ್ ಗುಂಡೂರಾವ್ ರವರು ಗೋವಾ ಭೇಟಿಗೆ ಆಗಮಿಸಿದ್ದ ಸಂದರ್ಬದಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಚರ್ಚಿಸಲಾಗಿತ್ತು. ಇದಕ್ಕೆ ಕಾಂಗ್ರೇಸ್ ಗ್ರೀನ್ ಸಿಗ್ನಲ್ ನೀಡಿದೆ. ಗೋವಾ ವಿಧಾನಸಭೆಯ 40 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಗೋವಾ ಫಾರ್ವಾರ್ಡ್ ಪಕ್ಷ ಸ್ಫರ್ಧಿಸಲು ಸಿದ್ಧತೆ ನಡೆಸಿದೆ. ಈ ಕುರಿತು ಸರ್ವೆ ನಡೆಸಲಾಗುತ್ತಿದೆ ಎಂದು ವಿಜಯ್ ಸರ್ದೇಸಾಯಿ ಮಾಹಿತಿ ನೀಡಿದರು.
ಇದನ್ನೂ ಓದಿ :ಸಂಭಾವನೆ ನೀಡದ ಅಧಿಕಾರಿಗಳು: ಪ್ರತಿಭಟನೆ ಎಚ್ಚರಿಕೆ ನೀಡಿದ ಶಿಕ್ಷಕರು
ಗೋವಾಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರವರು ಗೋವಾಕ್ಕೆ ಆಗಮಿಸಿದ ಸಂದರ್ಭದಲ್ಲಿ ಕೋವಿಡ್-19 ನಿಯಮಗಳಿರಲಿಲ್ಲವೇ…? ರಾಜ್ಯದಲ್ಲಿ ಪ್ರವಾಹದಿಂದ ಹಲವು ಕುಟುಂಬಗಳು ಸಂಕಷ್ಟದಲ್ಲಿರುವ ಇಂತಹ ಸಂದರ್ಭದಲ್ಲಿ ನಡ್ಡಾ ರವರನ್ನು ಡೋಲು ಬಡಿದು ಸಂಭ್ರಮಿಸಿ ಸ್ವಾಗತಿಸಲಾಗಿದೆ ಇದು ಸರಿಯೇ… ಎಂದು ಗೋವಾ ಫಾರ್ವಾರ್ಡ್ ಅಧ್ಯಕ್ಷ ವಿಜಯ್ ಸರ್ದೇಸಾಯಿ ಬಿಜೆಪಿಯನ್ನು ಪ್ರಶ್ನಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಶಾಸಕ ಜಯೇಶ್ ಸಾಳಗಾಂವಕರ್, ವಿನೋದ್ ಪಾಲಯೇಕರ್ ಉಪಸ್ಥಿತರಿದ್ದರು.