ನವದೆಹಲಿ/ಪಣಜಿ: ತೆಹಲ್ಕಾದ ಮಾಜಿ ಸಂಪಾದಕ ತರುಣ್ ತೇಜ್ ಪಾಲ್ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿರುವ ಗೋವಾ ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ.
2013ರ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಆರೋಪಿಯಾಗಿದ್ದ ತರುಣ್ ತೇಜ್ ಪಾಲ್ ಅವರನ್ನು ಮೇ 21ರಂದು ಗೋವಾದ ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿ ಅಂತಿಮ ತೀರ್ಪನ್ನು ಪ್ರಕಟಿಸಿತ್ತು. ಆದರೆ ಈ ತೀರ್ಪನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ಗೋವಾ ಸರ್ಕಾರ ಪ್ರತಿಕ್ರಿಯೆ ನೀಡಿತ್ತು.
2013 ರಲ್ಲಿ ನಿಯತಕಾಲಿಕೆ ಗೋವಾದ ಪಂಚತಾರಾ ಹೋಟೇಲ್ ನಲ್ಲಿ ಆಯೋಜಿಸಿದ್ದ ಸಂದರ್ಭ, ಲಿಪ್ಟ್ ನೊಳಗೆ ತನ್ನ ಸಹದ್ಯೋಗಿಯೊಬ್ಬರಿಗೆ ತರುಣ್ ತೇಜ್ ಪಾಲ್ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪಿಸಲಾಗಿತ್ತು.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಕ್ಷಮಾ ಜೋಶಿ ಮಾರ್ಚ್ 8 ರಂದು ತರುಣ್ ತೇಜ್‌ಪಾಲ್ ಪ್ರಕರಣದಲ್ಲಿ ಅಂತಿಮ ವಾದಗಳನ್ನು ಆಲಿಸಿ ತೀರ್ಪನ್ನು ಮೇ 21ರಂದು ಪ್ರಕಟಿಸುವುದಾಗಿ ತಿಳಿಸಿದ್ದರು.
ತರುಣ್ ತೇಜ್‌ಪಾಲ್ ವಿರುದ್ಧ ಸೆಕ್ಷನ್ 341 , 342 , 354 , 354 A (ಲೈಂಗಿಕ ಕಿರುಕುಳ)), 354 ಬಿ, 376 (2)(ಎಫ್) ಮತ್ತು 376(2)(ಕೆ) ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.