ಪಣಜಿ: ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಕೊಲೆ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಗೋವಾ ಸರ್ಕಾರ ಸೋಮವಾರ (ಸೆಪ್ಟೆಂಬರ್ 12) ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮತ್ತೆ ನಾಯಕತ್ವದ ಆಟಕ್ಕೆ ಮುಂದಾದ ಬಿಸಿಸಿಐ..: ಮುಂದಿನ ಸರಣಿಗೆ ಮತ್ತೋರ್ವ ನಾಯಕ!
ಗೋವಾ ಪೊಲೀಸರ ತನಿಖೆ ಬಗ್ಗೆ ಅಸಮಾಧಾನವ್ಯಕ್ತಪಡಿಸಿರುವ ಸೋನಾಲಿ ಫೋಗಟ್ ಕುಟುಂಬ ಸದಸ್ಯರು ಭಾನುವಾರ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿಯಾಗಿ, ಸಿಬಿಐ ತನಿಖೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು.
ಸೋನಾಲಿ ಫೋಗಟ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾರ ಪೊಲೀಸರಿಗೆ ಬಲವಾದ ಸಾಕ್ಷ್ಯಾಧಾರಗಳು ಸಿಕ್ಕಿವೆ. ಆದರೆ ಪ್ರಕರಣದ ಬಗ್ಗೆ ಫೋಗಟ್ ಮಗಳು ಮತ್ತು ಕುಟುಂಬ ಸದಸ್ಯರು ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು ಎಂದು ವರದಿ ಹೇಳಿದೆ.
ನಮಗೆ ಗೋವಾ ಪೊಲೀಸರ ಬಗ್ಗೆ ಸಂಪೂರ್ಣವಾಗಿ ವಿಶ್ವಾಸವಿದೆ. ಆದರೆ ಸೋನಾಲಿ ಫೋಗಟ್ ಮಗಳ ಬೇಡಿಕೆಯ ಹಿನ್ನೆಲೆಯಲ್ಲಿ, ಸಿಬಿಐ ತನಿಖೆ ನಡೆಸಲು ಶಿಫಾರಸು ಮಾಡಿರುವುದಾಗಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.