ಪಣಜಿ: ಭಾರತೀಯ ಹವಾಮಾನ ಇಲಾಖೆ, ಗೋವಾದಲ್ಲಿ ನಾಳೆಯೂ (ಮಂಗಳವಾರ, ಜೂನ್ 15) ಕೂಡ ರಾಜ್ಯದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.
ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತಯ ಹಿನ್ನೆಲೆಯಲ್ಲಿ ಇಂದು (ಸೋಮವಾರ, ಜೂನ್ 14) ರಾಜ್ಯದಲ್ಲಿ ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ : ಕೋವಿಡ್ ಗೆ ಪೋಷಕರನ್ನು ಕಳೆದುಕೊಂಡ ಮಕ್ಕಳ ವಿದ್ಯಾಬ್ಯಾಸದ ಹೊಣೆ ನನ್ನದು : ಸಚಿವ ಆರ್.ಅಶೋಕ್
ರಾಜ್ಯದಲ್ಲಿ ಕಳೆದೊಂದು ದಿನದಿಂದ ಭಾರಿ ಮಳೆಯಾಗುತ್ತಿರುವ ಕಾರಣದಿಂದಾಗಿ ಜನ ಜೀವನ ಅಸ್ತವ್ಯಸ್ಥವಾಗಿದೆ. ಇನ್ನೂ ಒಂದೆರಡು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಗೋವಾ ರಾಜ್ಯಾದ್ಯಂತ ರೆಡ್ ಅಲರ್ಟ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಗೋವಾದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ : ಕೋವಿಡ್ ಇಳಿಕೆ: ಜೂ.16ರಿಂದ ತಾಜ್ ಮಹಲ್, ಅಜಂತಾ ಸ್ಮಾರಕ ಭೇಟಿಗೆ ಪ್ರವಾಸಿಗರಿಗೆ ಅವಕಾಶ