Advertisement

Goa; ರಾಜ್ಯದ ಎಲ್ಲ ಶಾಲೆಗಳಲ್ಲಿ ಇಂಟರ್ ನೆಟ್ ಸೇವೆ: ಸಿಎಂ ಸಾವಂತ್

02:47 PM Jun 22, 2023 | Team Udayavani |

ಪಣಜಿ: ರಾಜ್ಯದ ಎಲ್ಲ ಶಾಲೆಗಳಿಗೆ ಇಂಟರ್ ನೆಟ್ ಸೇವೆಯನ್ನು ಒದಗಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

Advertisement

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತುರ್ತು ಸಿಬಂದಿ ಮತ್ತು ಪೊಲೀಸರ ವೇತನವನ್ನು ಒಂದೇ ಮಟ್ಟಕ್ಕೆ ತರಲಾಗಿದೆ ಎಂದು ತಿಳಿಸಿದರು. ಶಾಖಳಿಯ ಬಸ್ ನಿಲ್ದಾಣವನ್ನು ಕದಂಬ ನಿಗಮಕ್ಕೆ ಹಸ್ತಾಂತರಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಕೇಂದ್ರ ಕಾರಾಗೃಹದಲ್ಲಿ ಐದು ವೈದ್ಯಕೀಯ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ ನೀಡಲಾಗಿದೆ. ಗೋವಾ ಮೆಡಿಕಲ್ ಕಾಲೇಜಿನ ಆಸ್ಪತ್ರೆಗಳಲ್ಲಿ ಆಕ್ಯುಪೇಷನಲ್ ಥೆರಪಿಸ್ಟ್, ಕೆಮಿಸ್ಟ್ ಮತ್ತು ಇತರರ ಹುದ್ದೆಗಳನ್ನು ಸಹ ಮಂಜೂರು ಮಾಡಲಾಗಿದೆ. ಜುಲೈನಿಂದ ನಡೆಯಲಿರುವ ವಿಧಾನಸಭೆ ಅಧಿವೇಶನಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಅಧಿವೇಶನದಲ್ಲಿ ವಿವಿಧ ವಿಷಯಗಳ ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಗೃಹ ಆಧಾರ್, ದಯಾನಂದ ಸಾಮಾಜಿಕ ಭದ್ರತಾ ಯೋಜನೆ ಹಾಗೂ ಇತರೆ ಕಲ್ಯಾಣ ಯೋಜನೆಗಳ ಹಣವನ್ನು ಫಲಾನುಭವಿಗಳ ಖಾತೆಗೆ ಪ್ರತಿ ತಿಂಗಳ 10 ರಂದು ಫಲಾನುಭವಿಗಳ ಖಾತೆಗೆ ಜಮಾ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯ ಸರ್ಕಾರವು ಯೋಜನೆಯನ್ನು ಸರಳೀಕರಿಸಲು ಪ್ರಯತ್ನ ನಡೆಸಿದೆ. ಈ ಯೋಜನೆಯ ಫಲಾನುಭವಿಗಳು ಆರ್ಥಿಕವಾಗಿ ದುರ್ಬಲ ವರ್ಗದವರಾಗಿದ್ದು, ಅವರಿಗೆ ಈ ಯೋಜನೆಗಳ ಹಣದ ಅವಶ್ಯಕತೆಯಿದೆ.  ಕೆಲವು ಬಾರಿ ಪ್ರತಿ ತಿಂಗಳು ಈ ಯೋಜನೆಗಳ ಹಣ ಫಲಾನುಭವಿಗಳಿಗೆ ಲಭಿಸದಿದ್ದಾಗ, ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚಿನ ತೊಂದರೆಯುಂಟಾಗುತ್ತದೆ. ಇದರಿಂದಾಗಿ ಪ್ರತಿ ತಿಂಗಳ 10 ನೇ ತಾರೀಕಿನಂದು ಈ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next