Advertisement

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

05:16 PM Oct 24, 2021 | Team Udayavani |

ಪಣಜಿ: ಗೋವಾ ರಾಜ್ಯವನ್ನು ಬಯಲುಶೌಚದಿಂದ ಮುಕ್ತಗೊಳಿಸಲಾಗಿದೆ. ಭಾರತವು ಪ್ರತಿಯೊಂದು ಮನೆಗೆ ವಿದ್ಯುತ್ ಜೋಡಣೆಗೆ ಒತ್ತು ನೀಡಿತ್ತು, ಇದನ್ನು ಗೋವಾದಲ್ಲಿ ರಾಜ್ಯ ಸರ್ಕಾರವು ಸಾಧ್ಯಗೊಳಿಸಿದೆ. ಗೋವಾ ಸರ್ಕಾರವು ಮಹಿಳೆಯರ ಸುರಕ್ಷತೆಗಾಗಿ ಮತ್ತು ಸನ್ಮಾನಕ್ಕಾಗಿ ಅನೇಕ ಸರ್ಕಾರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.

Advertisement

ಪ್ರಧಾನಿ ನರೇಂದ್ರ ಮೋದಿಯವರು ವಾಸ್ಕೊದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆತ್ಮನಿರ್ಭರ ಭಾರತ ಸ್ವಯಂಪೂರ್ಣ ಗೋವಾ ಕಾರ್ಯಕ್ರಮದ ಲಾಭಾರ್ಥಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.

ಗೋವಾದಲ್ಲಿನ ಬಡ ಕುಟುಂಬಗಳಿಗೆ ಉಚಿತ ರೇಷನ್ ನೀಡಲು ಹೆಚ್ಚಿನ ಲಕ್ಷ್ಯವಹಿಸಲಾಗಿದೆ. ಗೋವಾದಲ್ಲಿ ಶೇ. 100 ರಷ್ಟು ಪ್ರಥಮ ಡೋಸ್ ಲಸಿಕೆ ಪೂರ್ಣಗೊಂಡಿದೆ. ಗೋವಾದ ಮಾಜಿ ಮುಖ್ಯಮಂತ್ರಿ ಹಾಗೂ ನನ್ನ ಮಿತ್ರ ದಿ. ಮನೋಹರ್ ಪರೀಕರ್ ರವರು ಗೋವಾ ರಾಜ್ಯವನ್ನು ಅಭಿವೃದ್ಧಿಯ ದೃಷ್ಠಿಯಿಂದ ಮುನ್ನಡೆಸಿಕೊಂಡುಹೋದರು. ಇಂದು ಗೋವಾ ರಾಜ್ಯವು ಹೆಚ್ಚಿನ ಅಭಿವೃದ್ಧಿ ಸಾಧಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next