Advertisement

ಗೋವಾ ರಾಜ್ಯದಲ್ಲಿ 15 ದಿನಗಳ ಸಂಪೂರ್ಣ ಲಾಕ್‍ಡೌನ್ ಘೋಷಣೆ ಮಾಡಿ:ಪ್ರತಿಪಕ್ಷದ ನಾಯಕ ದಿಗಂಬರ್

08:14 PM May 05, 2021 | Team Udayavani |

ಪಣಜಿ: ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ರಾಜ್ಯದಲ್ಲಿ ಎಲ್ಲ ಗಡಿಗಳನ್ನು ಬಂದ್ ಮಾಡಿ ರಾಜ್ಯದಲ್ಲಿ 15 ದಿನಗಳ ಸಂಪೂರ್ಣ ಲಾಕ್‍ಡೌನ್ ಘೋಷಣೆ ಮಾಡಬೇಕು. ಅಗತ್ಯ ಸರಕು ಸಾಗಿಸುವ ವಾಹನಗಳಿಗೆ ಮಾತ್ರ ರಾಜ್ಯ ಪ್ರವೇಶಾವಕಾಶ ನೀಡಬೇಕು ಎಂದು ರಾಜ್ಯ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Advertisement

ಪಣಜಿಯಲ್ಲಿ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್ ರವರ ನೇತೃತ್ವದಲ್ಲಿ ವಿವಿಧ ಪಕ್ಷದ ಶಾಸಕರ ಉಪಸ್ಥಿತಿಯಲ್ಲಿ ಸಭೆ ನಡೆಸಿದ ನಂತರ ಮಾತನಾಡಿದ ಅವರು- ಗೋವಾ ರಾಜ್ಯಕ್ಕೆ ಪ್ರವೇಶಿಸುವವರಿಗೆ ಆರ್‍ಟಿಪಿಸಿಆರ್ ಪರೀಕ್ಷೆಯನ್ನು ಖಡ್ಡಾಯಗೊಳಿಸಬೇಕು ಅಥವಾ ನೆಗೆಟಿವ್ ಪ್ರಮಾಣಪತ್ರ ಖಡ್ಡಾಯಗೊಳಿಸಬೇಕು. ರಾಜ್ಯದಲ್ಲಿ ಆಕ್ಸಿಜನ್ ಲಭ್ಯತೆ, ವೆಂಟಿಲೇಟರ್, ಬೆಡ್ಸ, ಮತ್ತು ಲಸಿಕೆಗಳ ಲಭ್ಯತೆ ಸೇರಿದಂತೆ ಕೋವಿಡ್ ಮ್ಯಾನೇಜ್ಮೆಂಟ್ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಬೇಕು.  ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ, ಮುಖ್ಯಮಂತ್ರಿ ಸಾವಂತ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ದಿಗಂಬರ್ ಕಾಮತ್ ಒತ್ತಾಯಿಸಿದರು.

ಇದನ್ನೂ ಓದಿ : ಕರೆ ಮಾಡಿದ್ರೆ ಮನೆ ಬಾಗಿಲಿಗೆ “ಆಕ್ಸಿಜನ್‌ ಸಮೇತ ಆಂಬ್ಯುಲೆನ್ಸ್‌”

ಆರ್‍ಟಿಪಿಸಿಆರ್ ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಖಡ್ಡಾಯಗೊಳಿಸುವ ಮೂಲಕ ಗೋವಾ ರಾಜ್ಯದಲ್ಲಿ ಪ್ರವಾಸಿಗರ ಪ್ರವೇಶವನ್ನು ಸರ್ಕಾರ ನಿರ್ಬಂಧಿಸಬೇಕು. ಲಾಕ್‍ಡೌನ್ ಅವಧಿಯಲ್ಲಿ ಔಷಧಾಲಯಗಳನ್ನು ತೆರೆದಿಡಬೇಕು, ಅಗತ್ಯ ವಸ್ತುಗಳ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾನ್ಹ 1 ಗಂಟೆಯವರೆಗೆ ತೆರೆದಿಡಲು ಅನುಮತಿ ನೀಡಬಹುದು. ರಾಜ್ಯ ಸರ್ಕಾರವು ಎಲ್ಲ ಜನರಿಗೂ ಉಚಿತವಾಗಿ ಲಸಿಕೆ ನೀಡಬೇಕು. ಪ್ರತಿ ಪಂಚಾಯತ ಮಟ್ಟದಲ್ಲಿ ಲಸಿಕಾ ಕೇಂದ್ರ ತೆರೆಯಬೇಕು ಎಂದು ದಿಗಂಬರ್ ಕಾಮತ್ ಸರ್ಕಾರವನ್ನು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next