ಪಣಜಿ : ಗೋವಾದಲ್ಲಿ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ರಾಜ್ಯಾದ್ಯಂತ ಕರ್ಫ್ಯೂ ಕಾಲಾವಧಿಯನ್ನು ಜೂನ್ 28 ರವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಶಾಪಿಂಗ್ ಮಾಲ್, ಮೀನು ಮಾರುಕಟ್ಟೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ : ಮಧ್ಯಪ್ರದೇಶ ಆಯ್ತು ಈಗ ಪಂಜಾಬ್ ನ ಜಲಂಧರ್ ನಲ್ಲಿ ಗ್ರೀನ್ ಫಂಗಸ್ ಪ್ರಕರಣ ಪತ್ತೆ
ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿದ್ದರೂ ಕೂಡ ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಫ್ಯೂ ಹೆಚ್ಚಿನ ಪ್ರಮಾಣದಲ್ಲಿ ಸರ್ಕಾರ ಸಡಿಲಿಕೆ ಮಾಡಿಲ್ಲ. ಸದ್ಯ ರಾಜ್ಯಾದ್ಯಂತ ಜಾರಿಯಲ್ಲಿರುವ ಕರ್ಫ್ಯೂ ಜೂನ್ 21 ರಂದು ಬೆಳಿಗ್ಗೆ ಮುಕ್ತಾಯಗೊಳ್ಳುತ್ತಿತ್ತು, ಆದರೇ, ರಾಜ್ಯ ಸರ್ಕಾರ ಇದೀಗ ಇನ್ನೂ 7 ದಿನಗಳ ಕಾಲ ಅಂದರೆ, ಜೂನ್ 28 ರ ವರೆಗೆ ಕರ್ಫ್ಯೂ ವಿಸ್ತರಣೆ ಮಾಡಿದೆ.
ಸರ್ಕಾರವು ಇದೀಗ ಮೂರನೇಯ ಹಂತದಲ್ಲಿ ಕರ್ಫ್ಯೂ ವಿಸ್ತರಣೆ ಮಾಡುವ ಸಂದರ್ಭದಲ್ಲಿ ಶಾಪಿಂಗ್ ಮಾಲ್, ಸಿನೆಮಾ ಹಾಲ್, ಮಲ್ಟಿಪ್ಲೆಕ್ಸ್ ಮತ್ತು ಮನೋರಂಜನಾ ವಿಭಾಗವನ್ನು ತೆರೆಯಲು ಬೆಳಿಗ್ಗೆ 7 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಅಗತ್ಯ ವಸ್ತುಗಳ ಅಂಗಡಿ ಮತ್ತು ರೇಶನ್ ಅಂಗಡಿಗಳು ಬೆಳಿಗೆ 7 ರಿಂದ ಮಧ್ಯಾನ್ಹ 3 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ.
ಇನ್ನು, ರಾಜ್ಯದಲ್ಲಿ ಸದ್ಯ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಬೇಕು ಮತ್ತು ಸರ್ಕಾರವು ಇಂತಹ ಸಣ್ಣ ವ್ಯಾಪಾರಿಗಳಿಗೆ ಸಹಾಯ ಹಸ್ತ ನೀಡಬೇಕು ಎಂಬ ಮಾತುಗಳು ಸಾಮಾಜಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಇದನ್ನೂ ಓದಿ : ಸ್ವಿಸ್ ಬ್ಯಾಕ್ ನಲ್ಲಿನ ಭಾರತೀಯರ ಠೇವಣಿಯ ವಿವರ ಕೇಳಿದ ಹಣಕಾಸು ಸಚಿವಾಲಯ..!