ಪಣಜಿ: ಗೋವಾದಲ್ಲಿ ಲೋಕಸಭಾ ಚುನಾವಣೆ ಮತದಾನ ಹೆಚ್ಚಿನ ಪ್ರಮಾಣದಲ್ಲಿ ಆಗಿದೆ, ಇದರಿಂದ ಬಿಜೆಪಿಗೆ ಲಾಭವಾಗಲಿದೆ. ಉತ್ತರ ಗೋವಾದಿಂದ ಶ್ರೀಪಾದ್ ನಾಯ್ಕ್ 1 ಲಕ್ಷ ಮತಗಳಿಂದ ಹಾಗೂ ದಕ್ಷಿಣ ಗೋವಾದಿಂದ ಪಲ್ಲವಿ ಧೆಂಪೊ 60 ಸಾವಿರ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಣಜಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರುರಾಜ್ಯದಲ್ಲಿ ಬಿಸಿಲಿನ ತಾಪವಿದ್ದರೂ ಮತದಾನಕ್ಕೆ ಉತ್ಸಾಹದಿಂದ ಮನೆಯಿಂದ ಹೊರ ಬಂದಿದ್ದಕ್ಕೆ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭಿವೃದ್ಧಿಯ ಬಗ್ಗೆ ಹೇಳಿಲ್ಲ. ಕೇವಲ ಧರ್ಮ, ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯಲು ಯತ್ನಿಸಿದರು. ಬಿಜೆಪಿ ಹಾಗೂ ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಎಸ್ಟಿ ಅಥವಾ ಒಬಿಸಿ ಸಮುದಾಯದ ಒಬ್ಬ ಅಥವಾ ಇಬ್ಬರನ್ನು ಒಕ್ಕಲೆಬ್ಬಿಸುವ ಮೂಲಕ ಇಡೀ ಸಮಾಜ ಬಿಜೆಪಿ ವಿರುದ್ಧವಾಗಿದೆ ಎಂದು ತೋರಿಸಲು ಪ್ರಯತ್ನಿಸಿದರು. ಈಗ ಮತದಾರರು ಅದರಲ್ಲೂ ಯುವ ಮತದಾರರು ಚುರುಕಾಗಿದ್ದಾರೆ. ಕಾಂಗ್ರೆಸ್‍ನ ಒಡೆದು ಆಳುವ ರಾಜಕಾರಣವನ್ನು ತಾವು ಒಪ್ಪುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ನ ವಿಧ್ವಂಸಕ ರಾಜಕಾರಣಕ್ಕೆ ಮತದಾರರು ತಕ್ಕ ಉತ್ತರ ನೀಡಿ ತಮ್ಮ ಸ್ಥಾನವನ್ನು ತೋರಿಸುತ್ತಾರೆ ಎಂಬ ನಂಬಿಕೆಯನ್ನು ತಾನಾವಡೆ ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.
ಉತ್ತರ ಗೋವಾ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಇದು ನಮ್ಮ ಕೊನೆಯ ಚುನಾವಣೆ. ಈ ಬಗ್ಗೆ ಪಕ್ಷಕ್ಕೆ ತಿಳಿಸಲಾಗಿದ್ದು, ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು. ಚುನಾವಣೆಯ ನಂತರ ಭಾರತ್ ಮೈತ್ರಿಯನ್ನು ಎಲ್ಲರೂ ಮರೆತುಬಿಡುತ್ತಾರೆ ಎಂದು ಸದಾನಂದ ತಾನಾವಡೆ ನುಡಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಸದಾನಂದ ಶೇಟ್ ತಾನಾವಡೆ, ಉತ್ತರ ಗೋವಾ ಅಭ್ಯರ್ಥಿ ಶ್ರೀಪಾದ ನಾಯ್ಕ ಉಪಸ್ಥಿತರಿದ್ದರು.