Advertisement

Results 2022:ಗೋವಾದಲ್ಲಿ ಬಿಜೆಪಿ ಮುನ್ನಡೆ, ಮಣಿಪುರದಲ್ಲಿ ಪ್ರಾದೇಶಿಕ ಪಕ್ಷವೇ ಕಿಂಗ್ ಮೇಕರ್

10:53 AM Mar 10, 2022 | Team Udayavani |

ನವದೆಹಲಿ:ಪಂಚರಾಜ್ಯ ಚುನಾವಣೆಯ ಮತಎಣಿಕೆ ಗುರುವಾರ (ಮಾರ್ಚ್ 10) ಬೆಳಗ್ಗೆ ಆರಂಭಗೊಂಡಿದ್ದು, ಈವರೆಗಿನ ಫಲಿತಾಂಶದ ಪ್ರಕಾರ ಗೋವಾ, ಮಣಿಪುರದಲ್ಲಿ ಭಾರತೀಯ ಜನತಾ ಪಕ್ಷ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ದ್ವಿತೀಯ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

Advertisement

ಇದನ್ನೂ ಓದಿ:Uttar Pradesh Election result 2022: ಅಖಿಲೇಶ್ ಸೈಕಲ್ ಗಿಂತ ಯೋಗಿ ಓಟವೇ ಜೋರು

ಗೋವಾದ ಎಲ್ಲಾ 40 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರುವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಸುಮಾರು ಶೇ.79ರಷ್ಟು ಮತದಾನವಾಗಿತ್ತು. ಮಣಿಪುರದಲ್ಲಿ ಫೆಬ್ರುವರಿ 28 ಮತ್ತು ಮಾರ್ಚ್ 05ರಂದು ಮತದಾನ ನಡೆದಿತ್ತು.

ಮಣಿಪುರದಲ್ಲಿ ಭಾರತೀಯ ಜನತಾ ಪಕ್ಷ 25 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ ಪಕ್ಷ 12ಸ್ಥಾನಗಳಲ್ಲಿ ಮುನ್ನಡೆ ಇತರರು 23 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 31 ಅಭ್ಯರ್ಥಿಗಳು ಗೆಲುವು ಸಾಧಿಸಬೇಕಾಗಿದೆ.

ಕುತೂಹಲದ ಸಂಗತಿ ಏನೆಂದರೆ ಮಣಿಪುರದಲ್ಲಿ ಸದ್ಯದ ಮತಎಣಿಕೆ ಟ್ರೆಂಡ್ ಪ್ರಕಾರ, ಪಕ್ಷೇತರರು ಹಾಗೂ ಇತರ ಪ್ರಾದೇಶಿಕ ಪಕ್ಷಗಳ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Advertisement

ಗೋವಾದಲ್ಲಿ 18 ಸ್ಥಾನಗಳಲ್ಲಿ ಭಾರತೀಯ ಜನತಾ ಪಕ್ಷ ಮುನ್ನಡೆಯಲ್ಲಿದ್ದು, 13 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ. ಮೊದಲ ಬಾರಿಗೆ ಆಮ್ ಆದ್ಮಿ ಪಕ್ಷ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸುವ ಮೂಲಕ ಖಾತೆ ತೆರೆಯಲು ಮುಂದಾಗಿದೆ.

40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 21 ಸ್ಥಾನಗಳ ಅಗತ್ಯವಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಭಾರತೀಯ ಜನತಾ ಪಕ್ಷ 32ರಿಂದ 38 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿತ್ತು. ಕಾಂಗ್ರೆಸ್ 12ರಿಂದ 17 ಸ್ಥಾನಗಳಲ್ಲಿ, ಎನ್ ಪಿಎಫ್ 3ರಿಂದ 5 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇರುವುದಾಗಿ ಸಮೀಕ್ಷೆ ತಿಳಿಸಿತ್ತು.

ಅದೇ ರೀತಿ ಗೋವಾದಲ್ಲೂ ಕಾಂಗ್ರೆಸ್ ಮೈತ್ರಿಕೂಟ 14ರಿಂದ 19 ಸ್ಥಾನಗಳಲ್ಲಿ, ಬಿಜೆಪಿ 13ರಿಂದ 18 ಸ್ಥಾನಗಳಲ್ಲಿ, ಮಹಾರಾಷ್ಟ್ರ ಗೋಮಾಂತಕ್ ಪಕ್ಷ (ಎಂಜಿಪಿ) 2ರಿಂದ 5 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ತಿಳಿಸಿತ್ತು.

ಸದ್ಯದ ಮತಎಣಿಕೆ ಫಲಿತಾಂಶದ ಪ್ರಕಾರ ಗೋವಾ ಮತ್ತು ಮಣಿಪುರದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಕಡಿಮೆಯಾಗಿದ್ದು, ಈ ಚುನಾವಣೆಯಲ್ಲೂ ಪಕ್ಷೇತರರು ಹಾಗೂ ಇತರ ಪ್ರಾದೇಶಿಕ ಪಕ್ಷಗಳೇ ಕಿಂಗ್ ಮೇಕರ್ ಗಳಾಗುವ ಸಾಧ್ಯತೆ ಗೋಚರಿಸುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next