Advertisement

ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್‌ ಸೈಲ್‌

06:04 PM Sep 30, 2024 | Team Udayavani |

ಉದಯವಾಣಿ ಸಮಾಚಾರ
ಕಾರವಾರ: ಉತ್ತರ ಕನ್ನಡ ಜಿಲ್ಲೆಯು ಆಕರ್ಷಕ ಪ್ರವಾಸಿ ತಾಣಗಳನ್ನು ಒಳಗೊಂಡಿದ್ದು ಮುಂದಿನ ದಿನಗಳಗಲ್ಲಿ ಅತ್ಯಾಕರ್ಷಕ ಯೋಜನೆಗಳ ಮೂಲಕ ಜಿಲ್ಲೆಯಲ್ಲಿ ಪ್ರವಾಸಿಗರ ಆಕರ್ಷಿಸಲು ಗೋವಾ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ರಾಜ್ಯ ಮಾರ್ಕೆಟಿಂಗ್‌ ಕಮ್ಯೂನಿಕೇಷನ್‌ ಆ್ಯಂಡ್‌ ಅಡ್ವಟೈಜಿಂಗ್‌ ಏಜೆನ್ಸಿ ಲಿಮಿಟೆಡ್‌ ಅಧ್ಯಕ್ಷ ಹಾಗೂ ಕಾರವಾರ ಶಾಸಕ ಸತೀಶ್‌ ಸೈಲ್‌ ಹೇಳಿದರು.

Advertisement

ಅವರು ರವಿವಾರ ಕಾರವಾರದ ರವೀಂದ್ರನಾಥ್‌ ಟಾಗೋರ್‌ ಕಡಲ ತೀರದಲ್ಲಿ, ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ
ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ನಡೆದ ಗಾಳಿ ಪಟ ಸ್ಪರ್ಧೆ ಮತ್ತು ಮರಳು ಶಿಲ್ಪ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ
ಚಿತ್ರಕಲೆ, ಗಾಳಿಪಾಟ ಸ್ಪರ್ಧೆ ಮತ್ತು ಮರಳು ಶಿಲ್ಪ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು. ಗೋವಾ ಬೀಚ್‌ಗಳಿಗಿಂತ ಪ್ರಾವಸೋದ್ಯಮಕ್ಕೆ ಪೂರಕವಾದ ಬೀಚ್‌ಗಳು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಗೋವಾದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಲು ಸಿ.ಆರ್‌.ಝಡ್‌ ಅನುಮತಿ ಪಡೆದು ಬೀಚ್‌ಗಳನ್ನು ಅಭಿವೃದ್ಧಿ ಪಡಿಸಿ ಸ್ಥಳೀಯ ವ್ಯಾಪರಸಸ್ಥರಿಗೆ ಉದ್ಯೋಗ
ನೀಡುವ ಮೂಲಕ ಸ್ಥಳೀಯ ಸಾಂಪ್ರದಾಯಕ ವಸ್ತುಗಳನ್ನು ಪ್ರವಾಸಿಗರಿಗೆ ತಿಳಿಸುವ ಮುಖಾಂತರ ಪ್ರವಾಸೋದ್ಯಮಕ್ಕೆ
ಹೆಸರುವಾಸಿಯಾಗಿದೆ.

ಅದೇ ಮಾದರಿಯಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ ಎಂದರು. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಹಾಗೂ ಪ್ರವಾಸಿಗರ ಮನರಂಜನೆಗಾಗಿ ಜಿಲ್ಲೆಯ ಕಡಲ ತೀರದಲ್ಲಿ ಪ್ಯಾರ ಸೈಕಲಿಂಗ್‌ ಸೇರಿದಂತೆ ಅನೇಕ
ಜಲಸಾಹಸ ಕ್ರೀಡೆಗಳು ಆರಂಭಿಸುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಹಾಗೂ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ ಪ್ಲೈ ಓವರ್ ಕೆಳಗಡೆ ಸಣ್ಣ ಅಂಗಡಿಗಳನ್ನು ನಿರ್ಮಾಣ ಮಾಡಿ ಸ್ಥಳೀಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಮೂಲಕ ಆರ್ಥಿಕವಾಗಿ ಸಬಲರನ್ನಾಗಿಲಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಾತನಾಡಿ, ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಸೋದ್ಯಮ ಇಲಾಖೆ
ವತಿಯಿಂದ ಚಿತ್ರಕಲೆ, ಗಾಳಿಪಾಟ ಸ್ಪರ್ಧೆ ಹಾಗೂ ಮರಳು ಶಿಲ್ಪಿ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲಾಗಿದೆ ಈ ಕಾರ್ಯಕ್ರಮಗಳಲ್ಲಿ ಉತ್ಸಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಕಂಡು ಸಂತಸ ವ್ಯಕ್ತಪಡಿಸಿದರು.

Advertisement

ಜಿಲ್ಲೆಯಲ್ಲಿ ಅನೇಕ ಪ್ರವಾಸಿ ಸ್ಥಳಗಳಿವೆ ಇಲ್ಲಿಗೆ ಆಗಮಿಸುವ ಪ್ರವಾಸಿಗಳಿಗೆ ಪ್ರವಾಸಿ ತಾಣಗಳ ಪರಿಚಯಿಸಲು ಕಾನ್ಸ್ ಟೇಬಲ್‌ ಬುಕ್‌ ಮಾಡಲು ನಿರ್ಧರಿಸಲಾಗಿದೆ. ಇದರ ಕವರ್‌ ಪೇಜ್‌ ನಾಳೆ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.‌ ಇದೇ ಸಂದರ್ಭದಲ್ಲಿ ಮರಳು ಶಿಲ್ಪ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರಿಗೆ ಸಾಮಗ್ರಿಗಳ ಕಿಟ್‌ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಗಣಪತಿ ಉಳ್ವೆಕರ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಜಯಂತ್‌ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next