Advertisement

ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆಗೆ ಕೋವಿಡ್‌ ಸೋಂಕು ದೃಢ

02:00 PM Sep 27, 2021 | Team Udayavani |

ಪಣಜಿ: ಬಿಜೆಪಿ ಗೋವಾ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ರವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಂಬೋಲಿಂ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಅವರ ಸಂಪರ್ಕದಲ್ಲಿರುವವರಲ್ಲಿ ಆತಂಕ ಹೆಚ್ಚುವಂತಾಗಿದೆ.

Advertisement

ಇದನ್ನೂ ಓದಿ:ಸಂಕಷ್ಟದಲ್ಲಿರುವ ಸಮಾಜ ಬಾಂಧವರ ಕಣ್ಣೀರೊರೆಸುವ ಧ್ಯೇಯ: ಸುಕುಮಾರ್‌ ಎನ್‌. ಶೆಟ್ಟಿ

ಗೋವಾ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆರವರು ರಾಜ್ಯಾದ್ಯಂತ ಸರಣಿ ಸಭೆಗಳಲ್ಲಿ ಪಾಲ್ಗೊಂಡಿದ್ದರು. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿದಿನ ಪಕ್ಷದ ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರೊಂದಿಗೆ ಸಂಪರ್ಕದಲ್ಲಿದ್ದರು. ಇದೀಗ ಸದಾನಂದ ತಾನಾವಡೆ ರವರಿಗೆ ಕರೋನಾ ಸೋಂಕು ದೃಢಪಟ್ಟಿರುವುದು ಅವರ ಸಂಪರ್ಕದಲ್ಲಿರುವ ಹೆಚ್ಚಿನ ಜನರಲ್ಲಿ ಆತಂಕ ಹೆಚ್ಚುವಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next