ಪಣಜಿ : ಗೋವಾದಲ್ಲಿ ಕೊವಿಡ್ ಎರಡನೇಯ ಅಲೆಯ ವೇಗ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಆದರೆ ರಾಜ್ಯದಲ್ಲಿ ಕ್ಯಾಸಿನೊ ಆರಂಭಿಸುವ ಕುರಿತಂತೆ ಸರ್ಕಾರ ಇದುವರೆಗೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕ್ಯಾಸಿನೊ ಆರಂಭಿಸುವ ಬಗ್ಗೆ ಸರ್ಕಾರ ಇದುವರೆಗೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಕೋವಿಡ್ ಎರಡನೇಯ ಅಲೆ ನಿಯಂತ್ರಿಸುವಲ್ಲಿ ಸರ್ಕಾರಕ್ಕೆ ಯಶಸ್ವಿಯಾಗುವ ಮಾರ್ಗದಲ್ಲಿದೆ.
ಇದನ್ನೂ ಓದಿ : ಎಲ್ ಐ ಸಿಯ ಈ ಪಾಲಿಸಿ ನೀವು ಪಡೆದರೇ, ಇಷ್ಟು ಪ್ರಮಾಣದಲ್ಲಿ ನಿಮಗೆ ಪಿಂಚಣಿ ಲಭ್ಯವಾಗುತ್ತದೆ.!?
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗುತ್ತಿದೆ. ಇದರಿಂದಾಗಿ ಸರ್ಕಾರ ಕೈಗೊಂಡ ಕಠಿಣ ನಿರ್ಣಯಗಳು ಫಲಿಸಿದಂತಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತೆ ಕೋವಿಡ್ ಹರಡದಂತೆ ಸರ್ಕಾರ ಎಚ್ಚರಿಕೆ ವಹಿಸುತ್ತಿದೆ ಎಂದಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಸಂಪೂರ್ಣ ಇಳಿಕೆಯಾಗುವವರೆಗೂ ರಾಜ್ಯದಲ್ಲಿ ಕರ್ಫ್ಯೂ ಮುಂದುವರೆಸಲಾಗುವುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಕಂಬಳ ಕುರಿತಾದ ಬಾಬು ರಾಜೇಂದ್ರ ಸಿಂಗ್ ನಿರ್ದೇಶನದ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ