Advertisement

ಸೋನಿಯಾ ಗಾಂಧಿ ಇಡಿ ವಿಚಾರಣೆ : ಗೋವಾದಲ್ಲಿ ಕಾಂಗ್ರೇಸ್ ಪ್ರತಿಭಟನೆ

04:33 PM Jul 26, 2022 | Team Udayavani |

ಪಣಜಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ.

Advertisement

ಬಿಜೆಪಿ ಸೇಡಿನ ರಾಜಕಾರಣಡಾ ವಿರುದ್ಧ ಓಲ್ಡ್ ಗೋವಾದಲ್ಲಿ ಗೋವಾ ಪ್ರದೇಶ ಕಾಂಗ್ರೇಸ್ ಪ್ರತಿಭಟನೆ ನಡೆಸಿತು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದೆ. ಕಳೆದ ವಾರ ಗುರುವಾರ ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಲಾಗಿತ್ತು. ಆ ಬಳಿಕ ಮಂಗಳವಾರ ಎರಡನೇ ಬಾರಿಗೆ ಇಡಿ ವಿಚಾರಣೆ ನಡೆಸಿದೆ. ಈ ವಿಚಾರಣೆಯ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸೇಡಿನ ರಾಜಕಾರಣ ಮತ್ತು ಕೇಂದ್ರದ ಅಧಿಕಾರವನ್ನು  ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : ಜಲಾಶಯಕ್ಕೆ ತಗ್ಗಿದ ಒಳ ಹರಿವು: ಕೃಷ್ಣಾ ನದಿಗೆ ಹೊರ ನೀರು ಸ್ಥಗಿತ

ನಿಖರವಾಗಿ ಏನು ಪ್ರಕರಣ?

Advertisement

ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು 1938 ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಾರಂಭಿಸಿದರು. ‘ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್’ ಹೆಸರಿನ ಕಂಪನಿಯು ಈ ಪತ್ರಿಕೆಯನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿತ್ತು. 70 ವರ್ಷಗಳ ನಂತರ 2008 ರಲ್ಲಿ ಪತ್ರಿಕೆ ನಷ್ಟದಿಂದ ಮುಚ್ಚಬೇಕಾಯಿತು. ಕಾಂಗ್ರೆಸ್ ಪಕ್ಷದ ನಿಧಿಯಿಂದ ಎಜೆಎಲ್‌ಗೆ 90 ಕೋಟಿ ರೂಪಾಯಿ ಬಡ್ಡಿ ರಹಿತ ಸಾಲ ನೀಡಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ 2010 ರಲ್ಲಿ ‘ಯಂಗ್ ಇಂಡಿಯನ್’ ಎಂಬ ಹೊಸ ಕಂಪನಿಯನ್ನು ಸ್ಥಾಪಿಸಿದರು. ಅಸೋಸಿಯೇಟೆಡ್ ಜರ್ನಲ್ಸ್ ಗೆ ನೀಡಿದ ಸಾಲಕ್ಕೆ ಪ್ರತಿಯಾಗಿ, ಯಂಗ್ ಇಂಡಿಯನ್ ಕಂಪನಿಯಲ್ಲಿ 99 ಪ್ರತಿಶತ ಪಾಲನ್ನು ಪಡೆದರು. ಯಂಗ್ ಇಂಡಿಯನ್ ಕಂಪನಿಯಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿ ತಲಾ 38 ಪ್ರತಿಶತ ಪಾಲು ಹೊಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next