ವಿರಾಮದ ನಂತರ ನ.21 ರಿಂದ ಗೋವಾದಲ್ಲಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರ ಎಸ್‌ಒಪಿ ಜಾರಿಗೊಳಿಸಿದೆ.
Advertisement
ರಾಜ್ಯ ಸರ್ಕಾರವು ಹೊರಡಿಸಿರುವ ಮಾರ್ಗ ಸೂಚಿಯ ಅನುಸಾರ- ಒಂದು ತರಗತಿಯಲ್ಲಿ ಕೇವಲ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಿ, ಪ್ರತಿಯೊಬ್ಬ ವಿದ್ಯಾರ್ಥಿ ನಡುವೆ ಆರು ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಶಾಲೆಗಳು ಶಿಫ್ಟ್ ಆಧಾರದ ಮೇಲೆ ತರಗತಿಗಳನ್ನು ನಡೆಸಬಹುದು. ಶಾಲಾ ಪ್ರವೇಶ ಮತ್ತು ನಿರ್ಗಮನ ಬಾಗಿಲ ಬಳಿ ವಿದ್ಯಾರ್ಥಿಗಳ ದೇಹ ಉಷ್ಣತೆ ತಪಾಸಣೆ ನಡೆಸುವುದು. ಶಾಲಾ ಆವರಣದಲ್ಲಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಶಾಲಾ ಸಿಬ್ಬಂದಿ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವುದು.
ಮನೆಯಿಂದಲೇ ಬೇಯಿಸಿದ ಆಹಾರ ತರುವುದು. ದೈಹಿಕ ಶಿಕ್ಷಣ ಚಟುವಟಿಕೆಗೆ ಅವಕಾಶವಿಲ್ಲ. ಮನೆಯಿಂದ ತಂದ ಆಹಾರವನ್ನು ಅಥವಾ ಇತರ ಯಾವುದೇ ಸಾಮಗ್ರಿಗಳನ್ನು ವಿದ್ಯಾರ್ಥಿಗಳು ಒಬ್ಬರಿಗೊಬ್ಬರು ವಿನಿಮಯ ಮಾಡಿಕೊಳ್ಳುವಂತಿಲ್ಲ. ಹೀಗೆ ಹತ್ತಾರು ನಿಯಮಗಳನ್ನು ಜಾರಿಗೊಳಿಸುವ ಮೂಲಕ ಗೋವಾದಲ್ಲಿ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಆರಂಭಿಸಲು ಸರ್ಕಾರ ನಿರ್ಣಯ ತೆಗೆದುಕೊಂಡಿದೆ. ಇದನ್ನೂ ಓದಿ:ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ