ಪಣಜಿ: ಕೋವಿಡ್ ಸಾಂಕ್ರಾಮಿಕ ಸೋಂಕಿನ ಪರಿಸ್ಥಿತಿಯಿಂದಾಗಿ ಗೋವಾ ಸರ್ಕಾರ ಹತ್ತನೇಯ ತರಗತಿ ಪರೀಕ್ಷೆಯನ್ನು ರದ್ಧುಗೊಳಿಸಿ ಆದೇಶ ಹೊರಡಿಸಿದೆ. ಮುಂದಿನ ಎರಡು ದಿನಗಳಲ್ಲಿ 12 ನೇಯ ತರಗತಿಯ ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸುವುದಾಗಿ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ : ಅಕ್ತಮವಾಗಿ ತಂಬಾಕು ಬಳಸಿ ಮಾವಾ ಮಾರುತ್ತಿದ್ದ ಇಬ್ಬರ ಬಂಧನ, ಇಬ್ಬರು ಪರಾರಿ
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯಿಂದಾಗಿ ಹತ್ತನೇಯ ತರಗತಿ ಪರೀಕ್ಷೆಯನ್ನು ರದ್ಧುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗೋವಾ ಬೋರ್ಡ ಆಫ್ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಶಾಲಾ ಶಿಕ್ಷಣ ಮಂಡಳಿ, ರಾಜ್ಯ ಶಿಕ್ಷಣ ಇಲಾಖೆ, ಶೈಕ್ಷಣಿಕ ಕ್ಷೇತ್ರದ ತಜ್ಞರು ಮತ್ತು ಇತರರು ಒಳಗೊಂಡ ಸಮೀತಿಯ ಶಿಫಾರಸ್ಸನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇನ್ನು, ಹತ್ತನೇಯ ತರಗತಿಯ ವಿದ್ಯಾರ್ಥಿಗಳಿಗೆ ಆಂತರಿಕ ಪರೀಕ್ಷೆಯ ಮೌಲ್ಯಮಾಪನದ ಆಧಾರದ ಮೇಲೆ ಪರೀಕ್ಷಾ ಫಲಿತಾಂಶಗಳನ್ನು ನಿಡಲಾಗುತ್ತದೆ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ಮತ್ತು ಡಿಪ್ಲೊಮಾಕ್ಕೆ ಪ್ರವೇಶ ಪಡೆಯುವವರು ಒಂದು ದಿನದ ಪರೀಕ್ಷೆಗೆ ಒಳಪಡಬೇಕಾಗುತ್ತದೆ. ದ್ವಿತೀಯ ಪಿಯುಸಿ ತರಗತಿಯ ಪರೀಕ್ಷೆಯ ನಿರ್ಧಾರವನ್ನು ಮುಂದಿನ ಎರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ತಿಮಿಂಗಿಲ ವಾಂತಿ ಸಾಗಾಟ ಮಾಡುತ್ತಿದ್ದ ಮೂವರ ಬಂಧನ, 5.35 ಕೆಜಿ ತೂಕದ ವಾಂತಿ ವಶ