ಪಣಜಿ: ಗೋವಾ ಅತ್ಯುತ್ತಮ ಶಿಕ್ಷಣ ಮತ್ತು ಸಂಶೋಧನೆಯ ಕೇಂದ್ರವಾಗುವ ಸಾಮರ್ಥ್ಯವನ್ನು ಹೊಂದಿದೆ. ಈ ಕ್ಷೇತ್ರದಲ್ಲಿ ಗೋವಾ ಅಗ್ರಸ್ಥಾನಕ್ಕೇರಲಿದೆ ಎಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶ್ವಾಸ ವ್ಯಕ್ತಪಡಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಪದವಿ ಸೇರಿದಂತೆ ವಿವಿಧ ವಿಭಾಗಗಳಿಂದ ಆಯ್ಕೆಯಾದ 20 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಗೋವಾ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿನಿಯರು ಹೆಚ್ಚಿನ ಪ್ರಮಾಣದಲ್ಲಿ ಪದವಿ ಪಡೆಯುತ್ತಿರುವುದು ಉತ್ತಮ ಸಂಗತಿ. ಹೆಣ್ಣುಮಕ್ಕಳು ಎಲ್ಲ ಕ್ಷೇತ್ರ ಗಳಲ್ಲಿಯೂ ಮುಂದೆ ಹೋಗುವುದನ್ನು ನೋಡಿ ನನಗೆ ಸಂತೋಷವಾಗಿದೆ. ಇಂದು ನೀವು ಪಡೆಯುವ ಪದವಿ ನಿಮ್ಮ ಉದ್ಯೋಗಕ್ಕೆ ಪ್ರಯೋಜನಕಾರಿಯಾಗುವುದಿಲ್ಲ ಆದರೆ ಅದಕ್ಕಿಂತ ಹೆಚ್ಚಾಗಿ ನಿಮಗೆ ಧೈರ್ಯವನ್ನು ನೀಡುತ್ತದೆ. ಎಂತಹ ಪರಿಸ್ಥಿತಿ ಬಂದರೂ ಧೈರ್ಯದಿಂದ ಎದುರಿಸಬಹುದು ಎಂದರು.
“ನಾವು ಕೃತಕ ಬುದ್ಧಿಮತ್ತೆ ಮತ್ತು ಡೇಟಾ ವಿಜ್ಞಾನದಲ್ಲಿ ಮುಂದೆ ಹೋಗಲು ಬಯಸುತ್ತೇವೆ” ಎಂದು ರಾಷ್ಟ್ರಪತಿ ಮುರ್ಮು ಹೇಳಿದರು. ಗೋವಾ ವಿಶ್ವವಿದ್ಯಾಲಯ ಈಗಾಗಲೇ ಈ ನಿಟ್ಟಿನಲ್ಲಿ ಕೆಲಸ ಆರಂಭಿಸಿದೆ. ಎಲ್ಲಾ ಪದವೀಧರ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ಕಲಿಕೆ ಇದು ನಿರಂತರ ಪ್ರಕ್ರಿಯೆ ಎಂದು ರಾಷ್ಟ್ರಪತಿಗಳು ನುಡಿದರು.
ಅವಕಾಶಗಳ ಲಾಭ ಪಡೆಯಲು ಮತ್ತು ಸವಾಲುಗಳನ್ನು ಎದುರಿಸಲು ಶಿಕ್ಷಣವು ಉಪಯುಕ್ತವಾಗಿದೆ. ಹೊಸ ಶಿಕ್ಷಣ ನೀತಿ 2023 ಗುಣಮಟ್ಟದ ಶಿಕ್ಷಣಕ್ಕಾಗಿ ಬದಲಾವಣೆಗಳನ್ನು ಮಾಡುತ್ತಿದೆ. ಶಿಕ್ಷಣ ನೀತಿಯು ಕೌಶಲ್ಯ ಶಿಕ್ಷಣ, ಉದ್ಯೋಗ ಮತ್ತು ಉದ್ಯಮ ಸಂಪರ್ಕಕ್ಕೆ ಲಿಂಕ್ ಆಗಿದೆ. ಗೋವಾದ ಎಲ್ಲಾ ವಿಭಾಗಗಳಿಗೂ ಧನ್ಯವಾದಗಳು. ಗೋವಾ ಶಿಕ್ಷಣ ಮತ್ತು ಸಂಶೋಧನೆಯ ಅತ್ಯುತ್ತಮ ಕೇಂದ್ರವಾಗುವ ಸಾಮರ್ಥ್ಯವನ್ನು ಹೊಂದಿದೆ. ಗೋವಾ ಮುಂಚೂಣಿಯಲ್ಲಿ ನಿಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಉಪಸ್ಥಿತರಿದ್ದ ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೆ ಹಾಗೂ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾತನಾಡಿದರು.