Advertisement
ಮಡಗಾಂವ್‍ನಲ್ಲಿ ವಿಕಾಸ್ ಭಾರತ್ ಸಂಕಲ್ಪ ಯಾತ್ರೆಯಲ್ಲಿ ಮುಖ್ಯಮಂತ್ರಿಗಳು ನಾಗರಿಕರೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಸರ್ಕಾರಿ ಇಲಾಖೆಗಳಲ್ಲಿನ ಭ್ರಷ್ಟಾಚಾರದ ವಿರುದ್ಧ ಕೆಲವು ನಾಗರಿಕರು ಧ್ವನಿ ಎತ್ತಿದರು. ಮಡಗಾಂವ್‍ನಲ್ಲಿ ಶೈಕ್ಷಣಿಕ ಸಂಕೀರ್ಣ ನಿರ್ಮಾಣ ವಿಳಂಬವಾಗುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಾವಂತ್ ಅವರನ್ನು ನಾಗರೀಕರು ಪ್ರಶ್ನಿಸಿದರು, ಈ ಕುರಿತು ಉತ್ತರಿಸಿದ ಸಿಎಂ ಸಾವಂತ್ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರವೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
Related Articles
Advertisement
ಎಸ್‍ಟಿ ಸಮುದಾಯದ ಅಭಿವೃದ್ಧಿಗೆ ಕಾಂಗ್ರೆಸ್ ಏನೂ ಮಾಡಿಲ್ಲ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮಾತ್ರ ಗಾವಡೆ, ಕುಣಬಿ ಮತ್ತು ವೇಳಿಪ ಸಮುದಾಯಗಳಿಗೆ ಎಸ್‍ಟಿ ಸ್ಥಾನಮಾನ ನೀಡಿದೆ ಎಂದು ಹೇಳಿದರು. ಕಾಂಗ್ರೆಸ್ ಕೇವಲ ಕ್ರಿಶ್ಚಿಯನ್ ಸಮುದಾಯದಲ್ಲಿ ಭಾರತೀಯ ಜನತಾ ಪಕ್ಷದ ಬಗ್ಗೆ ಭಯವನ್ನು ಹರಡಿತು ಮತ್ತು ಧರ್ಮಗಳ ನಡುವೆ ಒಡಕು ಮೂಡಿಸಲು ಪಿತೂರಿ ನಡೆಸಿತು. ಗೋವಾದ ಸಮಗ್ರ ಅಭಿವೃದ್ಧಿಗೆ ತಮ್ಮ ಸರಕಾರ ಶ್ರಮಿಸುತ್ತಿದ್ದು, ಸರಕಾರ ಮತ್ತು ವಿರೋಧ ಪಕ್ಷಗಳ ಶಾಸಕರೆಂಬ ಭೇದಭಾವವಿಲ್ಲದೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಹೇಳಿದರು.
ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ಬಿಜೆಪಿ ಸರಕಾರ ತನ್ನ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿರುವ ಜನಪರ ಪಾದಯಾತ್ರೆಯ ಬಗ್ಗೆಯಾಗಲಿ, ವಿವಿಧ ಕಲ್ಯಾಣ ಯೋಜನೆಗಳ ಬಗ್ಗೆಯಾಗಲಿ ಕಾಂಗ್ರೆಸ್ ಯೋಚಿಸಿಲ್ಲ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಪ್ರತಿ ಮನೆಗೆ ತೆರಳಿ ಜನರ ಅಗತ್ಯತೆ ಮತ್ತು ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ. 10 ವರ್ಷದಲ್ಲಿ ಗೋವಾದಲ್ಲಿ 35 ಸಾವಿರ ಕೋಟಿ ರೂ.ಅಭಿವೃದ್ಧಿ ಕಾರ್ಯಕ್ಕೆ ಖರ್ಚು ಮಾಡಲಾಗಿದೆ.ಸಮಾಜ ಕಲ್ಯಾಣಕ್ಕೆ ಪ್ರತ್ಯೇಕ ನಿಧಿ ಇದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.