Advertisement

ಎಲ್ಲಿಯವರೆಗೆ ಬಿಜೆಪಿ ಅಧಿಕಾರದಲ್ಲಿ ಇರುತ್ತದೆಯೋ ಅಲ್ಲಿಯವರೆಗೆ ಮಹಿಳೆಯರಿಗೆ ರಕ್ಷಣೆ ಇಲ್ಲ

04:25 PM Aug 14, 2021 | Team Udayavani |

ಪಣಜಿ: ಗೋವಾದಲ್ಲಿ ಮಹಿಳೆಯರ ಸುರಕ್ಷತೆಯು ಅತ್ಯಂತ ನಿರ್ಲಕ್ಷ್ಯ ಸ್ಥಿತಿಗೆ ತಲುಪಿದೆ. ಕಳೆದ ಒಂದು ತಿಂಗಳಲ್ಲಿ ಬಲಾತ್ಕಾರ, ಕೊಲೆ, ಅಪಹರಣ ಇಂತಹ 5 ಗಂಭೀರ ಪ್ರಕರಣಗಳು ರಾಜ್ಯದಲ್ಲಿ ನಡೆದಿದೆ. ಇಂತಹ ಪರಿಸ್ಥಿತಿಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹಾಗೂ ಇತರ ಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ರಾಜ್ಯ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಬೀನಾ ನಾಯ್ಕ ಆಗ್ರಹಿಸಿದ್ದಾರೆ.

Advertisement

ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ನಿಷೇಧಿಸಿ ಪಣಜಿಯ ಆಜಾದ್ ಮೈದಾನದಲ್ಲಿ ಮಹಿಳಾ ಕಾಂಗ್ರೇಸ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಧ್ಯಕ್ಷೆ ಬೀನಾ ನಾಯ್ಕ ಮಾತನಾಡಿ ರಾಜ್ಯದಲ್ಲಿ ಎಲ್ಲಿಯ ವರೆಗೆ ಬಿಜೆಪಿ ಸರ್ಕಾರ ಇರುತ್ತದೆಯೋ ಅಲ್ಲಿಯ ವರೆಗೂ ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವಿಲ್ಲ.

ಗೋವಾ ಒಂದು ಜಗತ್ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು, ಗೋವಾ ರಾಜ್ಯವನ್ನು ರಕ್ಷಿಸಿ ಎಂದು ಆಗ್ರಹಿಸುವ ಪರಿಸ್ಥಿತಿ ಬಂದಿದೆ. ಗೋವಾದಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವ ಪ್ರಮಾಣ ಶೇ 30 ರಷ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುವಂತಾಗಿದೆ. ಇಷ್ಟೇ ಅಲ್ಲದೆಯೇ ರಾಜ್ಯದಲ್ಲಿ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವಿಲ್ಲ. ಇದರಿಂದಾಗಿ ಮಹಿಳೆಯರಿಗೆ ತ್ವರಿತವಾಗಿ ನ್ಯಾಯ ಲಭಿಸುತ್ತಿಲ್ಲ ಎಂದು ಬೀನಾ ನಾಯ್ಕ ನುಡಿದರು.

ಇದನ್ನೂ ಓದಿ :ಸಿದ್ದಕಟ್ಟೆ: ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಅತ್ಯಾಚಾರ, ಕೊಲೆ ಬೆದರಿಕೆ

Advertisement

Udayavani is now on Telegram. Click here to join our channel and stay updated with the latest news.

Next