ಬೀದರ: ಮಕ್ಕಳು ವಿದ್ಯಾಭ್ಯಾಸದ ಬಗ್ಗೆ ಆಸಕ್ತಿ ಹೊಂದಬೇಕು. ಗುರಿ ಸಾಧನೆಗಾಗಿ ಸತತ ಅಧ್ಯಯನ ಮಾಡಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಕರೆ ನೀಡಿದರು.
ನಗರದ ಜಿಲ್ಲಾ ರಂಗಮಂದಿರದಲ್ಲಿ ಸೋಮವಾರ ನಡೆದ ಎನ್‌ಈಕೆಆಆರ್‌ಟಿಸಿ ಬೀದರ ವಿಭಾಗದ ಸಿಬ್ಬಂದಿಗಳ ಮಕ್ಕಳಿಗೆ ಶೈಕ್ಷಣಿಕ ಕ್ಷೇತ್ರದ ಆಯ್ಕೆ, ಸ್ಫೂರ್ತಿ, ಪ್ರೇರಣೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಉತ್ತಮವಾದ ಕೌಶಲಗಳನ್ನು ಹೊಂದಿದಲ್ಲಿ ಜೀವನದಲ್ಲಿ ಯಶ ಸಾ ಧಿಸಬಹುದು ಎಂದು ತಿಳಿಸಿದರು.
ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದಿವೆ ಎಂದು ವಿದ್ಯಾರ್ಥಿಗಳು ಕೀಳರಿಮೆ ಹೊಂದಬಾರದು. ಸೋಲನ್ನೇ ಗೆಲುವಿನ ಮೆಟ್ಟಿಲಾಗಿಸಿಕೊಂಡು ಮರಳಿ ಯತ್ನವ ಮಾಡಿದಲ್ಲಿ ಜಯ ಸಾಧಿಸಬಹುದು ಎಂದು ಸಲಹೆ ನೀಡಿದರು.
ಎಸ್‌ಪಿ ನಾಗೇಶ ಡಿ.ಎಲ್. ಮಾತನಾಡಿ, ಮಕ್ಕಳು ಉನ್ನತವಾದ ಗುರಿ ಹೊಂದಿ ಓದಿದಾಗ ದೊಡ್ಡ ಹುದ್ದೆಗೆ ಸೇರುವ ಅವಕಾಶ ದೊರಕುವುದು. ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದಿದ್ದರೂ ಶಿಕ್ಷಣಕ್ಕೆ ಯಾವುದೇರೀತಿಯ ಕೊರತೆ ಆಗದು. ಸರ್ಕಾರದ ಶೈಕ್ಷಣಿಕ ಯೋಜನೆಗಳ ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಮಾತನಾಡಿ, ವಿದ್ಯಾರ್ಥಿಗಳು ಪ್ರತಿನಿತ್ಯ ಓದಿನ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಂಡಲ್ಲಿ ದೈಹಿಕ, ಮಾನಸಿಕ ಮತ್ತು ಸದೃಢವಾಗಿ ಬೆಳೆಯಲು ಸಾಧ್ಯ ಎಂದರು. ಎನ್‌ಈಕೆಆಆರ್‌ಟಿಸಿ ಸಂಸ್ಥೆಯ ಕೊಟ್ರೆಪ್ಪ, ವಿಭಾಗದ ನಿಯಂತ್ರಣಾಧಿಕಾರಿ ಚಂದ್ರಶೇಖರ ಫುಲೇಕರ್, ಆಡಳಿತಾಧಿಕಾರಿ ಮಹದೇವಪ್ಪ, ಪ್ರಭುಸ್ವಾಮಿ ಸೇರಿದಂತೆ ಸಿಬ್ಬಂದಿ ಮತ್ತು ವåಕ್ಕಳು ಉಪಸ್ಥಿತರಿದ್ದರು.