Advertisement
ಫೆ. 22ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದಾರೆ. ಬಾಲಕಿಯ ಪೋಷಕರು ತಮಿಳುನಾಡು ಮೂಲದವರಾಗಿದ್ದು, ಕೆಲ ವರ್ಷಗಳಿಂದ ಸಂಜಯನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಆಕೆಯ ಪೋಷಕರಿಬ್ಬರೂ ಬೀದಿ ಬದಿ ತಳ್ಳುಗಾಡಿಯಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ಸಂತ್ರಸ್ತ ಬಾಲಕಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ.
Related Articles
Advertisement
ಬಾಲಕಿಯನ್ನು ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಬಾಲಕಿಯನ್ನು ಪ್ರಶ್ನಿಸಲಾಗಿದ್ದು, ತನ್ನನ್ನು ಕರೆದೊಯ್ದ ವ್ಯಕ್ತಿ ಆಟೋದಲ್ಲಿ ವಾಪಸ್ ತಂದು ಮನೆ ಬಳಿ ಬಿಟ್ಟುಹೋಗಿರುವುದಾಗಿ ಹೇಳಿಕೆ ನೀಡಿದ್ದಾಳೆ. ಆಘಾತದಲ್ಲಿರುವ ಬಾಲಕಿ ಚೇತರಿಸಿಕೊಂಡ ಬಳಿಕ ಮಾಹಿತಿ ಪಡೆಯಲಾಗುವುದು. ಆರೋಪಿ ಬಂಧನಕ್ಕೆ ತಂಡ ರಚಿಸಲಾಗಿದ್ದು, ಸ್ಥಳೀಯ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
***
ಪ್ರೇಮದ ನಾಟಕ, ಬಳಿಕ ಅತ್ಯಾಚಾರಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ 27 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಹನುಮಂತ ನಗರ ಪೊಲೀಸರು ಬಂಧಿಸಿದ್ದಾರೆ. ಜಯನಗರ ನಿವಾಸಿ ರವಿಕುಮಾರ್ (32) ಬಂಧಿತ. ಗುಜರಾತ್ ಮೂಲದ ಈತ ಕೆ.ಆರ್.ಪುರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಅದೇ ಕಂಪನಿಯಲ್ಲೇ ಯುವತಿ ಕೂಡ ಕೆಲಸ ಮಾಡುತ್ತಿದ್ದರು. ಕಚೇರಿಯಲ್ಲಿಯೇ ಇಬ್ಬರಿಗೂ ಸ್ನೇಹವಾಗಿ ಸ್ನೇಹ ಪ್ರೀತಿಗೆ ತಿರುಗಿತ್ತು. ಮದುವೆಯಾಗುವುದಾಗಿ ನಂಬಿಸಿದ ಆರೋಪಿ ಒಂದೂವರೆ ವರ್ಷದಲ್ಲಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ಮದುವೆಗೆ ನಿರಾಕರಿಸಿದ್ದರಿಂದ ಯುವತಿ ರವಿಕುಮಾರ್‌ನ ಪೋಷಕರ ಬಳಿ ಮೊದಲು ದೂರಿದ್ದರು. ಆದರೆ ರವಿಕುಮಾರ್‌ನ ಪೋಷಕರೂ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಯುವತಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ***
ಮದುವೆ ಆಗೋದಾಗಿ ನಂಬಿಸಿ ನಿರಂತರ ಅತ್ಯಾಚಾರ
ಬೆಂಗಳೂರು: ವಿವಾಹ ಆಗುವುದಾಗಿ ನಂಬಿಸಿ ವ್ಯಾಪಾರಿಯೊಬ್ಬರು ನಿರಂತರವಾಗಿ ಅತ್ಯಾಚಾರ ನಡೆಸಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ 39 ವರ್ಷದ ಮಹಿಳೆಯೊಬ್ಬರು ಸಂಜಯನಗರ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 40 ವರ್ಷದ ವ್ಯಾಪಾರಿಗೆ ವಿವಾಹವಾಗಿದ್ದು, ಕಳೆದ 16 ವರ್ಷಗಳಿಂದ ಮಹಿಳೆ ಜತೆ ಸ್ನೇಹವೊಂದಿದ್ದರು. ಸ್ನೇಹ ಪ್ರೀತಿಗೆ ತಿರುಗಿತ್ತು ಎಂದು ಹೇಳಲಾಗಿದೆ. “ಮೊದಲ ಪತ್ನಿಗೆ ವಿಚ್ಚೇದನ ನೀಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿ ನನ್ನನ್ನು ಪ್ರೀತಿಸುತ್ತಿರುವುದಾಗಿ ಹೇಳಿದ್ದರು. ಇಬ್ಬರು ಒಟ್ಟಿಗೆ ಒಂದೆ ಮನೆಯಲ್ಲಿ ಜೀವನ ನಡೆಸುತ್ತಿದ್ದೆವು. ವಿವಾಹವಾಗುವುದಾಗಿ ನಂಬಿಸಿ ಹಲವು ಬಾರಿ ನನ್ನ ಜತೆ ದೈಹಿಕ ಸಂಪರ್ಕ ಸಾಧಿಸಿದ್ದರು. ಇದೀಗ ವಿವಾಹವಾಗದೆ ವಂಚನೆ ಮಾಡಿದ್ದಾರೆ,” ಎಂದು ಮಹಿಳೆ ದೂರಿನಲ್ಲಿ ಉಲ್ಲೇಖೀಸಿದ್ದಾರೆ.