ಲಕ್ನೋ: ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನದಿಂದಾಗಿ ಕೋವಿಡ್ ಸಾಂಕ್ರಾಮಿಕದ ಎರಡು ವರ್ಷಗಳ ಅವಧಿಯಲ್ಲಿಯೂ ಪ್ರತಿ ಮನೆಯ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಯುಪಿಯ ಅಟ್ರೌಲಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಳೆದ ಎರಡು ವರ್ಷಗಳ ಕೋವಿಡ್‌ನಲ್ಲಿ ಲಕ್ಷ್ಮಿ ದೇವಿಯು ಕಮಲದ ಮೇಲೆ ಕುಳಿತು ಪ್ರತಿ ಮನೆಗೆ ಬಂದಳು. ಇದು ಪ್ರಧಾನಿ ಮೋದಿಯವರಿಂದ ಸಾಧ್ಯವಾಯಿತು” ಎಂದು ಹೇಳಿದರು.
ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷವನ್ನು ಟೀಕೆ ಮಾಡಿದ ಶಾ, “ಅವರು ಎಂದಿಗೂ ಬಡವರ ಬಗ್ಗೆ ಯೋಚಿಸುವುದಿಲ್ಲ ಮತ್ತು ಅಭಿವೃದ್ಧಿಗೆ ಏನನ್ನೂ ಮಾಡುವುದಿಲ್ಲ” ಎಂದು ಹೇಳಿದರು.
ಇದನ್ನೂ ಓದಿ:ನಾನು ಹೇಮಾ ಮಾಲಿನಿಯಾಗಲು ಬಯಸುವುದಿಲ್ಲ : ಜಯಂತ್ ಚೌಧರಿ
“ಈ ಬುವಾ-ಭಟಿಜಾ ಏನು ಮಾಡಿದ್ದಾರೆ ಎಂದು ನಾನು ನಿಮ್ಮನ್ನು ಕೇಳುತ್ತೇನೆ? ಅವರೇನು ಮಾಡಿಲ್ಲ, ‘ಗ್ಯಾಸ್, ಶೌಚಾಲಯ, ವಿದ್ಯುತ್, ಮನೆ’ ಇದನ್ನೆಲ್ಲ ಪ್ರಧಾನಿ ಮೋದಿ ಮಾಡಿದ್ದಾರೆ” ಎಂದು ಶಾ ಹೇಳಿದರು.
ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯು ಫೆ.10ರಿಂದ ಆರಂಭವಾಗಲಿದ್ದು, ಏಳು ಹಂತಗಳಲ್ಲಿ ನಡೆಯಲಿದೆ. ಮತ ಎಣಿಕೆ ಕಾರ್ಯ ಮಾರ್ಚ್ 10ರಂದು ನಡೆಯಲಿದೆ.