Advertisement
ಸಂಜೆ 5 ಗಂಟೆಗೆ ಪಾಲಿಕೆಯ ಗುಣನಿಯಂತ್ರಣ ಲ್ಯಾಬ್ ಕಚೇರಿಯ ಕಟ್ಟಡದಲ್ಲಿ ಬೆಂಕಿಕಾಣಿಸಿದ್ದು, ದುರಂತ ಸಂಭವಿಸಿದ ಕೊಠಡಿಯಲ್ಲಿ ಕರ್ತವ್ಯದಲ್ಲಿದ್ದ ಬಿಬಿಎಂಪಿಯ ಚೀಫ್ ಎಂಜಿನಿಯರ್ ಸೇರಿ 9 ಮಂದಿಗೆ ಸುಟ್ಟ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಲ್ಲಿ ಇಬ್ಬರು ಮಹಿಳಾ ಸಿಬ್ಬಂದಿ ಸೇರಿದ್ದು ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು ವೈದ್ಯರ ನಿಗಾದಲ್ಲಿದ್ದಾರೆ.
Related Articles
Advertisement
ಘಟನಾ ಸ್ಥಳಕ್ಕೂ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ ಸಿಎಂಸಿಎಂ ಸಿದ್ದರಾಮಯ್ಯ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬೆಂಕಿ ಅವಘಡ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯ ಕುರಿತು ವಿವರವನ್ನು ಅಧಿಕಾರಿಗಳಿಂದ ಪಡೆದುಕೊಂಡರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಚಿವರಾದ ರಾಮಲಿಂಗಾರೆಡ್ಡಿ. ಭೈರತಿ ಸುರೇಶ್ ಅವರುಗಳು ಜತೆಗಿದ್ದರು. 3 ತಂಡಗಳಿಂದ ಪ್ರತ್ಯೇಕ ತನಿಖೆ
ಬೆಂಗಳೂರು: ಅಗ್ನಿ ಅನಾಹುತ ನಡೆದ ಗುಣಮಟ್ಟ ಪರಿಶೀಲನೆ ಪ್ರಯೋಗಾಲಯ ಇರುವ ಜಾಗವೇ ಇದಲ್ಲ. ಮುಖ್ಯಮಂತ್ರಿಗಳು ಕೂಡ ಅದನ್ನೇ ಗಮನಿಸಿದ್ದಾರೆ. ಇಂತಹ ಪ್ರಯೋಗಾಲಯ ಸುರಕ್ಷಿತ ಜಾಗದಲ್ಲಿ ಇಡಬೇಕು. ಹೀಗಾಗಿ ಇದನ್ನು ಸ್ಥಳಾಂತರ ಮಾಡಲಾಗುವುದು ಎಂದು ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ಅವಘಡದ ಕುರಿತು ಬಿಬಿಎಂಪಿ ಅಧಿಕಾರಿಗಳು, ಪೊಲೀಸರು ಸೇರಿದಂತೆ ಮೂರು ತಂಡಗಳು ಪ್ರತ್ಯೇಕ ತನಿಖೆ ಮಾಡಲಿವೆ ಎಂದು ಹೇಳಿದರು.
ಈ ಅವಘಡದಲ್ಲಿ ಗಾಯಾ ಳುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಸಿಬ್ಬಂದಿಗೆ ಸರ್ಕಾರ ಸೂಚನೆ ನೀಡಿದೆ. ಗಾಯಾಳುಗಳನ್ನು ಐಸಿಯುನಲ್ಲಿ ಇರಿಸಿ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಅವರ ಶೀಘ್ರ ಗುಣಮುಖಕ್ಕೆ ಎಲ್ಲಾ ನೆರವು ನೀಡುತ್ತೇವೆ. ಅದೃಷ್ಟವಶಾತ್ ಯಾರಿಗೂ ದೃಷ್ಟಿಗೆ ತೊಂದರೆ ಆಗಿಲ್ಲ ಎಂದು ತಿಳಿಸಿದರು. ಮುಖ್ಯ ಎಂಜಿನಿಯರ್‌ಗಳಿಂದ ಗಾಯಗೊಂಡವರು ಯುವಕರಾಗಿದ್ದು, ಅವರಿಗೆ ಉಜ್ವಲ ಭವಿಷ್ಯವಿದೆ. ಅವರಿಗೆ ಈ ರೀತಿ ಆಗಬಾರದಿತ್ತು. ಈ ಅವಘಡಕ್ಕೆ ಸಂಬಂಧಿಸಿದಂತೆ ನಾನು ಯಾರ ಮೇಲೂ ದೂರಲು ಹೋಗುವುದಿಲ್ಲ. ಉಳಿದಂತೆ ನಾನು ತನಿಖೆ ಮುಗಿಯುವವರೆಗೂ ಯಾವುದರ ಬಗ್ಗೆ ಹೇಳಿಕೆ ನೀಡುವುದಿಲ್ಲ. ಇದು ಪೂರ್ವನಿಯೋಜಿತ ಎಂಬ ವಿರೋಧ ಪಕ್ಷದ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಮಾತಾಡಬೇಕು ಮಾತನಾಡಲಿ ಬಿಡಿ” ಎಂದರು.