Advertisement

ದೆಹಲಿಗೆ ಹೋಗುತ್ತಿದ್ದೇನೆ..ನಂಬರ್ ಬಗ್ಗೆ ಮಾತನಾಡುವುದಿಲ್ಲ: ಡಿ.ಕೆ.ಶಿವಕುಮಾರ್

05:14 PM May 15, 2023 | Team Udayavani |

ಬೆಂಗಳೂರು: ಭರ್ಜರಿ ಗೆಲುವಿನ ನಂತರ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಅಗ್ನಿ ಪರೀಕ್ಷೆ ಎದುರಿಸುತ್ತಿದ್ದು, ಮುಖ್ಯಮಂತ್ರಿ ಸ್ಥಾನದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಹಿರಿಯ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಇಬ್ಬರೂ ಕಣ್ಣಿಟ್ಟಿದ್ದಾರೆ. ಸಿದ್ದರಾಮಯ್ಯ ಈಗಾಗಲೇ ದೆಹಲಿ ತಲುಪಿದ್ದು, ಡಿಕೆ ಶಿವಕುಮಾರ್ ಅವರು ತಮ್ಮ ಹುಟ್ಟುಹಬ್ಬದ ನಿಮಿತ್ತ ಬೆಂಗಳೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾತ್ರಿ ವೇಳೆಗೆ ದೆಹಲಿ ತಲುಪುವುದಾಗಿ ಸೋಮವಾರ ಮಧ್ಯಾಹ್ನ ತಿಳಿಸಿದ್ದಾರೆ.

Advertisement

ಸದಾಶಿವ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ”ನಾನು ನನ್ನ ಜನ್ಮ ದಿನದ ಕಾರಣ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ದೆಹಲಿಗೆ ತೆರಳುತ್ತಿದ್ದೇನೆ. ನಂಬರ್ ಗಳ ಕುರಿತು ಮಾತನಾಡುವುದಿಲ್ಲ. ನನ್ನ ಅಧ್ಯಕ್ಷತೆಯಲ್ಲಿ 135 ಸ್ಥಾನಗಳನ್ನು ಗೆಲ್ಲಲಾಗಿದೆ. ನಿನ್ನೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಸಿಎಂ ಆಯ್ಕೆ ಕುರಿತು ಖರ್ಗೆ ಅವರು ತೀರ್ಮಾನ ಮಾಡುತ್ತಾರೆ” ಎಂದರು.

ತುಮಕೂರಿನ ನೊಣವಿನಕೆರೆ ಗ್ರಾಮದಲ್ಲಿರುವ ಅಜ್ಜಯ್ಯನ ಮಂದಿರಕ್ಕೆ ಕುಟುಂಬ ಸಮೇತವಾಗಿ ಡಿ.ಕೆ.ಶಿವಕುಮಾರ್ ಅವರು ತೆರಳಲಿದ್ದು, ಆ ಬಳಿಕ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

ಭಾನುವಾರ, ಕಾಂಗ್ರೆಸ್ ನೇಮಿಸಿದ ವೀಕ್ಷಕರ ತಂಡವು ಹೊಸದಾಗಿ ಚುನಾಯಿತರಾದ ಎಲ್ಲಾ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿ ಯಾರಿಗೆ ಸಿಎಂ ನೀಡಬೇಕು ಎಂಬುದರ ಕುರಿತು ಮತ ಪಡೆದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ರಾಷ್ಟ್ರೀಯ ನಾಯಕತ್ವದೊಂದಿಗೆ ಚರ್ಚೆಗಾಗಿ ತಂಡವು ಈಗ ದೆಹಲಿಯಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next