Advertisement

ಎತ್ತ ಸಾಗುತ್ತಿದೆ ಭಾರತ ಜನಾಂದೋಲನ

01:01 PM Apr 16, 2018 | Team Udayavani |

ನಂಜನಗೂಡು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಪ್ರತಿಯೊಬ್ಬರು ಸಂಕಲ್ಪ ತೊಡಬೇಕಿದೆ ಎಂದು ವಿಚಾರವಾದಿ ಪ್ರೊ.ಜಿ.ಕೆ.ಗೋವಿಂದರಾವ್‌ ಕರೆ ನೀಡಿದರು.

Advertisement

ಪಟ್ಟಣದ ಅಂಬೇಡ್ಕರ್‌ ಸಮುದಾಯ ಭವದನಲ್ಲಿ ಆಯೋಜಿಸಿದ್ದ “ಎತ್ತ ಸಾಗುತ್ತಿದೆ ಭಾರತ’ ಜನಾಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್‌ ಕೊಟ್ಟಿರುವ ಸರ್ವಶ್ರೇಷ್ಠ ಸಂವಿಧಾನವನ್ನು ಬದಲಾಯಿಸಿ ಮನಸ್ಥಿತಿಯನ್ನು ಮತ್ತೆ ದೇಶದಲ್ಲಿ ಬಿತ್ತುವ ಹುನ್ನಾರ ನಡೆಸುತ್ತಿರುವ ಬಿಜೆಪಿ ದೇಶಕ್ಕೆ ಮಾರಕವಾಗಿದೆ.

ಸಂವಿಧಾನ ಬದಲಾಯಿಸುವ ಸಲುವಾಗಿಯೇ ನಾನು ಅಧಿಕಾರಕ್ಕೆ ಬಂದಿರುವುದಾಗಿ ಹೇಳುವ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ, ಹಿಂದೆ ದೊಡ್ಡ ಶಕ್ತಿಯ ಕೈವಾಡದಿಂದ ಈ ರೀತಿಯ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಪರಿಶಿಷ್ಟ ಜಾತಿ ಪಂಗಡ ದೌರ್ಜನ್ಯ ಕಾಯ್ದೆ ದುರ್ಬಲಗೊಳಿಸಲು ಸಮ್ಮತಿಸಿರುವುದಾಗಿ ಸುಪ್ರೀಂಕೋರ್ಟ್‌ ನ್ಯಾಯಧೀಶರು ಹೇಳಿಕೆ ನೀಡಿರುವುದು ಬಿಜೆಪಿ ಒಳಮರ್ಮ ಬಯಲಿಗೆಳೆದಿದೆ.

ಇನ್ನು ಕಣ್ಣೊರೆಸುವ ತಂತ್ರ ಅನುಸರಿಸುತ್ತಿರುವ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಸಂಪೂರ್ಣ ವಿಫ‌ಲರಾಗಿದ್ದಾರೆ ಎಂದು ಟೀಕಿಸಿದರು. ಸಂವಿಧಾನ ಬದಲಾಯಿಸುವುದನ್ನೇ ಗುರಿಯಾಗಿಸಿಕೊಂಡಿರುವ ಬಿಜೆಪಿ ಸರ್ಕಾರ ಎಲ್ಲಾ ರಾಜ್ಯಗಳಲ್ಲಿ ಅಧಿಕಾರ ಹಿಡಿಯುವ ಹುನ್ನಾರ ನಡೆಸುತ್ತಿದೆ.

ಹೀಗಾಗಿ ಕರ್ನಾಟಕದಲ್ಲಿ ಇದಕ್ಕೆ ಅವಕಾಶ ನೀಡದಂತೆ ಮತದಾರರು ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಆ ನಿಟ್ಟಿನಲ್ಲಿ ಮತದಾರರು ಕೋಮುವಾದಿ ಪಕ್ಷಕ್ಕೆ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ಮತದಾರರು ಮುಂದಾಗದಿದ್ದಲ್ಲಿ ನಮಗೆ ಉಳಿಗಾಲವಿಲ್ಲ ಎಂದು ಕಿಡಿಕಾರಿದರು.

Advertisement

ರಂಗಕರ್ಮಿ ಜನಾರ್ದನ್‌ ಜನ್ನಿ ಹೋರಾಟದ ಗೀತೆಗಳನ್ನು ಹಾಡಿದರು. ದಸಂಸ ರಾಜ್ಯ ಸಂಚಾಲಕರಾದ ಗುರುಪ್ರಸಾದ್‌ ಕೆರೆಗೋಡು, ರಾಜ್ಯ ಸಂಘಟನಾ ಸಂಚಾಲಕರಾದ ಹೆಬ್ಟಾಲೆ ಲಿಂಗರಾಜು, ಜಿಲ್ಲಾ ಸಂಘಟನಾ ಸಂಚಾಲಕರಾದ ಮಲ್ಲಹಳ್ಳಿ ನಾರಾಯಣ, ಜಿಲ್ಲಾ ಸಂಚಾಲಕರಾದ ಅಲಗೂಡು ಶಿವಕುಮಾರ್‌, ಸರ್ಕಾರಿ ಪ್ರಥಮರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ.ಎಂ.ಮಹದೇವ ಭರಣಿ,

ಉಪವಿಭಾಗೀಯ ಸಂಚಾಲಕ ಮಂಜು ಶಂಕರಪುರ, ರೈತಸಂಘ ಹಸಿರುಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ತಾಲೂಕು ಅಧ್ಯಕ್ಷ ಟಿ.ಆರ್‌.ವಿದ್ಯಾಸಾಗರ್‌, ಜನಸಂಗ್ರಾಮ ಪರಿಷತ್‌ ವಿಭಾಗೀಯ ಕಾರ್ಯದರ್ಶಿ ನಗರ್ಲೆ ಎಂ.ವಿಜಯಕುಮಾರ್‌, ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಅಭಿನಾಗಭೂಷಣ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next