ಬೆಳಗಾವಿ/ಗೋಕಾಕ: ಸದ್ಯ ಗೋಕಾಕ ತಾಲೂಕಿನಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು, ಹೀಗೆಯೇ ಸರ್ಕಾರದ ಮಾರ್ಗಸೂಚಿ ಪಾಲಿಸುತ್ತ ಹೋದರೆ ಮುಂದಿನ 10 ದಿನಗಳಲ್ಲಿ ಕೊರೊನಾ ಚೈನ್ ಬ್ಲಾಕ್ ಆಗಿ ನೆಮ್ಮದಿಯ ನಿಟ್ಟುಸಿರು ಬಿಡಬಹುದಾಗಿದೆ ಎಂದು ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಾಲೂಕಿನ ಕೋವಿಡ್ -19 ಮಾಹಿತಿ ಪಡೆದುಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿನ ಇಳಿಮುಖ ಆಗುತ್ತಿದೆ. ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತಾಗಬೇಕು ಎಂದರು.
ಗ್ರಾಮ ಮಟ್ಟದಲ್ಲಿ ಪಿಡಿಒ ಹಾಗೂ ಟಾಸ್ಕ್ ಪೋರ್ಸ್ ಕೂಡಿ ಕೆಲಸ ಮಾಡಬೇಕು. ಗ್ರಾಮದಲ್ಲಿ ಸೋಂಕಿತರು ಕಂಡು ಬಂದರೆ ಕೂಡಲೇ ಅವರನ್ನು ಐಸೋಲೇಷನ್ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದರು.
ಇದನ್ನೂ ಓದಿ: ಲಾಭ ಗಳಿಸಿದ ಟೈಟಾನ್, ಏಷ್ಯನ್ ಪೇಂಟ್ಸ್ ಷೇರು;ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 125 ಅಂಕ ಜಿಗಿತ
ಗೋಕಾಕ ತಾಲೂಕಿನ ಮಲ್ಲಾಪುರ ಪಿ.ಜಿ. ಗ್ರಾಮದಲ್ಲಿರುವ ಕೋವಿಡ್ ಕೇರ್ ಕೇಂದ್ರದಲ್ಲಿ ಹಾಸಿಗೆಗಳು ಖಾಲಿ ಇವೆ. ಅಲ್ಲಿ ಭರ್ತಿಯಾದರೆ ಹಿರೇನಂದಿ, ರಾಜನಕಟ್ಟೆ ಗ್ರಾಮದಲ್ಲಿ ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯಲಾಗಿದೆ. ತಾಲೂಕಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಗ್ರಾಮೀಣ ಜನತೆ ಸತ್ಕಾರದ ಮಾರ್ಗಸೂಚಿ ಪಾಲಿಸಬೇಕು. ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು. ಆಗಾಗ ಕೈ ತೊಳೆದುಕೊಳ್ಳಬೇಕು. ಅನಾವಶ್ಯಕವಾಗಿ ಹೊರಗೆ ಓಡಾಡಬಾರದು. ಮದುವೆ ಹಾಗೂ ಅಂತ್ಯಸಂಸ್ಕಾರಗಳಲ್ಲಿ ಹೆಚ್ಚು ಜನರು ಸೇರಬಾರದು ಎಂದು ಮನವಿ ಮಾಡಿದರು.
ಇದನ್ನೂ ಓದಿ: ಕೇಂದ್ರ ಸರ್ಕಾರದ ನೂತನ ಐಟಿ ನಿಯಮ: ದೆಹಲಿ ಹೈಕೋರ್ಟ್ ಮೊರೆ ಹೋದ ವಾಟ್ಸಾಪ್ ?