Advertisement

ಶಾಲೆಯಲ್ಲಿ ಊಟವಿಲ್ಲದೇ ಮಕ್ಕಳು ಅಸ್ವಸ್ಥ

01:04 PM Jul 18, 2019 | Naveen |

ಗೋಕಾಕ: ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಸಿವಿನಿಂದ ತೀವ್ರ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ನಡೆದಿದೆ.

Advertisement

ವಡೇರಹಟ್ಟಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢಶಾಲೆಗೆ ಬಿಸಿಯೂಟದ ವ್ಯವಸ್ಥೆ ಸ್ಥಳೀಯ ಸ್ತ್ರೀ ಶಕ್ತಿ ಮಹಿಳಾ ಸಂಘಕ್ಕೆ ನೀಡಲಾಗಿದ್ದು, ಕಳೆದ ಎರಡು ವರ್ಷಗಳಿಂದ ಸರಿಯಾಗಿ ಬಿಸಿಯೂಟ ನೀಡುವುದೇ ಇಲ್ಲವೆಂದು ಆರೋಪಿಸಿ ವಿದ್ಯಾರ್ಥಿಗಳು ಶಾಲೆಯಿಂದ ಒಂದೂವರೆ ಕಿ.ಮೀ. ದೂರ ಇರುವ ಗ್ರಾಪಂ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಅಲ್ಲಿ ಯಾರೂ ಇಲ್ಲದರಿಂದ ವಿದ್ಯಾರ್ಥಿಗಳು ಅಲ್ಲಿಂದ ವಾಪಸ್‌ ಬಂದಿದ್ದಾರೆ. ನಂತರ ಖಾಲಿ ಹೊಟ್ಟೆಯಲ್ಲಿ ಚುರುಮರಿ ತಿಂದು ನೀರು ಕುಡಿದಿದ್ದರಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ನಂತರ ವಿದ್ಯಾರ್ಥಿಗಳ ಬಳಲಿಕೆಯನ್ನು ಕಂಡು ಸ್ಥಳೀಯರು ಆಂಬ್ಯುಲೆನ್ಸ್‌ ಹಾಗೂ ಖಾಸಗಿ ವಾಹನಗಳಲ್ಲಿ ವಿದ್ಯಾರ್ಥಿಗಳನ್ನು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಓರ್ವ ವಿದ್ಯಾರ್ಥಿಯನ್ನು ನಗರದ ಕೆಎಲ್ಇ ಆಸ್ಪತ್ರೆಗೆ ಸೇರಿಸಲಾಗಿದ್ದು, ಉಳಿದ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ| ಆರ್‌.ಎಸ್‌. ಬೆಣಚಿನಮರಡಿ ತಿಳಿಸಿದ್ದಾರೆ. ಘಟನೆಯ ಸುದ್ದಿ ತಿಳಿದ ಕೂಡಲೇ ಮೂಡಲಗಿ ತಹಶೀಲ್ದಾರ್‌ ಮುರಳೀಧರ ತಳ್ಳಿಕೇರಿ, ಉಪತಹಶೀಲ್ದಾರ್‌ ಎಲ್.ಎಚ್. ಭೋವಿ, ಬಿಇಒಗಳಾದ ಅಜಿತ್‌ ಮನ್ನಿಕೇರಿ ಹಾಗೂ ಜಿ.ಬಿ. ಬಳಗಾರ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು

Advertisement

Udayavani is now on Telegram. Click here to join our channel and stay updated with the latest news.

Next