ಗೋಕರ್ಣ: ಕುಮಟಾ ತಾಲೂಕಿನಲ್ಲಿರುವ ಮಹಾಬಲೇಶ್ವರ ದೇವಸ್ಥಾನವನ್ನು ಬುಧವಾರ ಸರ್ಕಾರಕ್ಕೆ ಪುನಃ ಹಸ್ತಾಂತರ ಮಾಡಲಾಗಿದೆ.
ಹೊಸನಗರದ ರಾಮಚಂದ್ರಾಪುರ ಮಠದ ಆಡಳಿತದಲ್ಲಿದ್ದ ಮಹಾಬಲೇಶ್ವರ ದೇವಸ್ಥಾನವನ್ನು ಹೈಕೋರ್ಟ್ ಆದೇಶದ ಮೇರೆಗೆ ಗೋರ್ಕಣ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ದೇವಸ್ಥಾನದ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರೂ ಅಗಿರುವ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ವಹಿಸಿಕೊಂಡರು.
ದೇವಸ್ಥಾನದ ಸಾಮಗ್ರಿ, ಬೆಲೆಬಾಳುವ ವಸ್ತುಗಳ ಪಟ್ಟಿಯನ್ನು ಇಂದು ಪುನಃ ಪರಿಶೀಲನೆ ನಡೆಸಿ ಉಸ್ತುವಾರಿ ಸಮಿತಿ ವಶಕ್ಕೆ ಪಡೆಯಲಾಯಿತು.
ಸರ್ಕಾರದ ಕ್ರಮದ ವಿರುದ್ಧ ಗೋಕರ್ಣ ಹಿತರಕ್ಷಣಾ ವೇದಿಕೆ ಮೂಲಕ ನ್ಯಾಯಾಲಯದ ಮೊರೆ ಹೋಗಿತ್ತು. ಆಗಸ್ಟ್ 10 ರಂದು ದೇವಸ್ಥಾನವನ್ನು ಸರ್ಕಾರದ ವಶಕ್ಕೆ ಪಡೆಯಲು ಹೈಕೋರ್ಟ್ ಆದೇಶಿಸಿತ್ತು. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
ಹಸ್ತಾಂತರದ ವೇಳೆ ಅಪರ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಕುಮಟಾ ಉಪವಿಭಾಗಾಧಿಕಾರಿ ಲಕ್ಷ್ಮಿ ಪ್ರಿಯ, ಮುಜರಾಯಿ ಇಲಾಖೆ ಅಧಿಕಾರಿಗಳು ದೇವಸ್ಥಾನಕ್ಕೆ ಆಗಮಿಸಿ, ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡಿದರು.
ದೇವಸ್ಥಾನದ ಬಳಿ ಹಸ್ತಾಂತರ ಹಿನ್ನಲೆ ಹಿಂದಿನ ಅರ್ಚಕರು ಸೇರಿದಂತೆ ಹಲವರ ವಿರೋಧವಿದ್ದ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.