Advertisement

ಪ್ರಸಕ್ತ ವಿತ್ತೀಯ ವರ್ಷದ ಮೊದಲ ತ್ತೈಮಾಸಿಕದಲ್ಲಿ ಚಿನ್ನದ ಆಮದು ಏರಿಕೆ

09:45 PM Jul 25, 2021 | Team Udayavani |

ನವದೆಹಲಿ : ಪ್ರಸಕ್ತ ವಿತ್ತೀಯ ವರ್ಷದ ಮೊದಲ ತ್ತೈಮಾಸಿಕದಲ್ಲಿ ಚಿನ್ನದ ಆಮದು ಮೌಲ್ಯ ಹೆಚ್ಚಾಗಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ 58,572.99 ಕೋಟಿ ರೂ. ಮೌಲ್ಯದ ಚಿನ್ನವನ್ನು ವಿದೇಶಗಳಿಂದ ಆಮದು ಮಾಡಲಾಗಿದೆ.

Advertisement

ಕಳೆದ ವರ್ಷದ ಇದೇ ಅವಧಿಯಲ್ಲಿ ಹಳದಿ ಲೋಹದ ಆಮದು ಪ್ರಮಾಣ 5,208.41 ಕೋಟಿ ರೂ.ಗಳಿಗೆ ಇಳಿಕೆಯಾಗಿತ್ತು. ಅದಕ್ಕೆ ತದ್ವಿರುದ್ಧವಾಗಿ ಬೆಳ್ಳಿಯ ಆಮದು ಪ್ರಮಾಣ ಶೇ.93.7ರಷ್ಟು ಇಳಿಕೆಯಾಗಿದೆ.

ಹೆಚ್ಚಿನ ಪ್ರಮಾಣದಲ್ಲಿ ಚಿನ್ನದ ಆಮದು ಮಾಡಿಕೊಂಡದ್ದರಿಂದಲಾಗಿ ವ್ಯಾಪಾರ ವ್ಯವಸ್ಥೆಯಲ್ಲಿ ಕೊರತೆ ಪ್ರಮಾಣ ಹೆಚ್ಚಾಗಿದೆ. ಇದೇ ವೇಳೆ, ರತ್ನಗಳ ರಫ್ತು ಕೂಡ 9.1 ಮಿಲಿಯ ಡಾಲರ್‌ಗಳಿಗೆ ಏರಿಕೆಯಾಗಿದೆ.

ಇದನ್ನೂ ಓದಿ :ಯುನೆಸ್ಕೋ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿದ ಐತಿಹಾಸಿಕ ರಾಮಪ್ಪ ದೇವಸ್ಥಾನ

Advertisement

Udayavani is now on Telegram. Click here to join our channel and stay updated with the latest news.

Next