Advertisement

ದೇಶದಲ್ಲಿ ಚಿನ್ನದ ಆಮದು ಪ್ರಮಾಣ ಶೇ.73 ಏರಿಕೆ

09:02 PM Mar 13, 2022 | Team Udayavani |

ಮುಂಬೈ: ದೇಶದಲ್ಲಿ ಚಿನ್ನದ ಆಮದು ಪ್ರಮಾಣ ಶೇ.73 ಹೆಚ್ಚಾಗಿದೆ.

Advertisement

ಈ ಬಗ್ಗೆ ಕೇಂದ್ರ ವಾಣಿಜ್ಯ ಸಚಿವಾಲಯದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಸಕ್ತ ವಿತ್ತೀಯ ವರ್ಷದ ಏಪ್ರಿಲ್‌ನಿಂದ ಫೆಬ್ರವರಿ ವರೆಗಿನ ಅವಧಿಯಲ್ಲಿ 26.11 ಬಿಲಿಯನ್‌ ಅಮೆರಿಕನ್‌ ಡಾಲರ್‌ ಮೊತ್ತದ ಚಿನ್ನ ಆಮದು ಮಾಡಿಕೊಳ್ಳಲಾಗಿದೆ.

ಆ ಪ್ರಮಾಣ ಈ ವರ್ಷದ ಫೆಬ್ರವರಿಯಲ್ಲಿ ಶೇ.11.45ಕ್ಕೆ ಇಳಿಕೆಯಾಗಿದೆ ಎಂದು ಉಲ್ಲೇಖೀಸಲಾಗಿದೆ. ಇತರ ದೇಶಗಳಿಂದ ಚಿನ್ನ ಆಮದು ಮಾಡಿಕೊಳ್ಳುವುದರಲ್ಲಿ ಚೀನ ಮೊದಲ ಸ್ಥಾನದಲ್ಲಿದೆ.

ಭಾರತ 2ನೇಯ ಸ್ಥಾನ ಪಡೆದುಕೊಂಡಿದೆ. ಇದೇ ವೇಳೆ, ಚಿನ್ನಾಭರಣ ಮತ್ತು ರತ್ನಗಳನ್ನು ರಫ್ತು ಮಾಡಿಕೊಳ್ಳುವ ಪ್ರಮಾಣ ಪ್ರಸಕ್ತ ವಿತ್ತೀಯ ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ಶೇ.57.5 ಹೆಚ್ಚಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next