ಚಿಕ್ಕಬಳ್ಳಾಪುರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯ ಅಪರಾಧ ದಾಖಲಾತಿ ವಿಭಾಗದಲ್ಲಿ ಸಹಾಯಕ ಆರಕ್ಷಕ ಉಪ ನಿರೀಕ್ಷಕರಾಗಿ ಪ್ರಸ್ತುತ ಕಾರ್ಯನಿರ್ವಹಿಸುತಿರುವ ಹಾಗೂ ಅತ್ಯುತ್ತಮ ಸೇವೆ ಮಾಡಿದ ಹೆಚ್.ನಂಜುಂಡಯ್ಯ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರಿನ ವಿಧಾನಸೌದದ ಬ್ಯಾಂಕ್ವೆಂಟ್ ಹಾಲ್‍ನಲ್ಲಿ ಪ್ರಧಾನ ಮಾಡಿದರು.
ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ 2017 ನೇ ಸಾಲಿನಲ್ಲಿ ಘೋಷಣೆ ಆಗಿದ್ದ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಧಾನವು ಶುಕ್ರವಾರ ಬೆಂಗಳೂರಿನಲ್ಲಿ ನಡೆಯಿತು. ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ನಂಜುಂಡಯ್ಯ ಜಿಲ್ಲೆಯಿಂದ ಪದಕ ಸ್ವೀಕರಿಸಿದ ಏಕಮೇವ ವ್ಯಕ್ತಿಯಾಗಿದ್ದಾರೆ ಗೃಹ ಸಚಿವರು ಸಹಿತ ಗಣ್ಯರ ಸಮ್ಮುಖದಲ್ಲಿ ನಂಜುಂಡಯ್ಯ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಧಾನ ಮಾಡಿದರು.
ನಂಜುಂಡಯ್ಯ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಡಿವೈಎಸ್ಪಿ ಕೆ.ರವಿಶಂಕರ್ ಸೇರಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಸಂಘ ಸಂಸ್ಥೆ ಹಾಗೂ ಸಂಘಟನೆಗಳ ಪ್ರಮುಖರು ಅಭಿನಂದಿಸಿದ್ದಾರೆ.