Advertisement

ಚಿನ್ನದ ಗಣಿಯಲ್ಲಿ ಅಗ್ನಿ ದುರಂತ: 27 ಸಾವು

12:44 AM May 09, 2023 | Team Udayavani |

ಯಾಂಕಿಹುವಾ: ದಕ್ಷಿಣ ಪೆರುವಿನ ಗ್ರಾಮವೊಂದರ ಚಿನ್ನದ ಗಣಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 27ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪೆರುವಿನ ಕಾಂಡೆಸುಯೊಸ್‌ ಪ್ರಾಂತದ ಗಣಿಯಲ್ಲಿ ಈ ಸ್ಫೋಟ ಸಂಭವಿಸಿದೆ.

Advertisement

ಅವಘಡದ ಬಳಿಕ ಗಣಿಯಲ್ಲಿ ಕೆಲಸ ಮಾಡುತ್ತಿದ್ದ, 175 ಕ್ಕೂ ಹೆಚ್ಚು ಕಾರ್ಮಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ದಕ್ಷಿಣ ಅಮೆರಿಕದ ಇತಿಹಾಸದಲ್ಲಿ ಇದೊಂದು ಘೋರ ಗಣಿ ದುರಂತವಾಗಿದೆ.

ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲವಾಗಿದ್ದು ತನಿಖೆ ಮುಂದುವರಿದಿದೆ ಎಂದು ಸರಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಗಣಿಯಲ್ಲಿ ಮಾಡಿದ ಸ್ಫೋಟದ ಪರಿಣಾಮ ಶಾರ್ಟ್‌ ಸರ್ಕ್ನೂಟ್‌ನಿಂದಾಗಿ ಈ ಅವಘಡ ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Advertisement

Udayavani is now on Telegram. Click here to join our channel and stay updated with the latest news.

Next