Advertisement

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

08:41 AM Apr 20, 2024 | Team Udayavani |

ಹೊಸದಿಲ್ಲಿ: ಚಿನ್ನ ಮತ್ತು ಬೆಳ್ಳಿಯ ಬೆಲೆ ಮತ್ತೆ ಗಗನಕ್ಕೇರಿದೆ. ಶುಕ್ರವಾರ 400 ರೂ.ಏರಿಕೆಯೊಂದಿಗೆ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 74,100 ರೂ.ಗಳಿಗೆ ತಲುಪಿದೆ. ಈ ಮೂಲಕ ಚಿನ್ನದ ಬೆಲೆ ಏರಿಕೆಯಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ.

Advertisement

ಇನ್ನು ಬೆಳ್ಳಿ 100 ರೂ.ಗಳಷ್ಟು ಹೆಚ್ಚಳವಾಗಿದ್ದು, ಒಂದು ಕೆ.ಜಿ. ಬೆಳ್ಳಿಯ ಬೆಲೆ 86,600 ರೂ.ಗಳಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್‌ ಚಿನ್ನದ ಬೆಲೆ 540 ರೂ.ಗಳ ಏರಿಕೆಯೊಂದಿಗೆ 10 ಗ್ರಾಂಗೆ 74,340 ರೂ.ಗಳಾಗಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗದೇ ಒಂದು ಕೆ.ಜಿ. ಬೆಳ್ಳಿ ಬೆಲೆ 86,500 ರೂ.ಗಳಲ್ಲಿ ಸ್ಥಿರವಾಗಿದೆ. ಗುರುವಾರ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದ್ದು ನಿರಾಳ ತಂದಿತ್ತು ಬೆನ್ನಲ್ಲೇ ಮತ್ತೆ ಬೆಲೆ ಏರಿಕೆ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next