ನವದೆಹಲಿ: ಕೇಂದ್ರ ಸರ್ಕಾರ 2021-22ನೇ ಸಾಲಿನ ಬಜೆಟ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಮೇಲೆ ಶೇ.7.5ರಷ್ಟು ಸೀಮಾಸುಂಕವನ್ನು ಇಳಿಸಿದ ಪರಿಣಾಮ ಹಳದಿ ಲೋಹದ ಬೆಲೆಯಲ್ಲಿ 1,400 ರೂಪಾಯಿ ಇಳಿಕೆಯಾಗಿದೆ.
ಇದನ್ನೂ ಓದಿ:ನೊಬೆಲ್ ಯಾಕೆ, ಸಂಚಿನ ದಾಖಲೆ ಕೊಟ್ಟ ಗ್ರೆಟಾಗೆ ಮಕ್ಕಳ ಶೌರ್ಯ ಪ್ರಶಸ್ತಿ ಕೊಡಬೇಕು: ಲೇಖಿ ಕಿಡಿ
ಭಾರತದಲ್ಲಿ ಈಗ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 46, 600 ರೂಪಾಯಿ, 24 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 47, 600 ರೂಪಾಯಿ. ಸೀಮಾಸುಂಕ ಇಳಿಕೆಯಾದ ಹಿನ್ನೆಲೆಯಲ್ಲಿ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆಯಾಗಿದೆ.
ಗುಡ್ ರಿಟರ್ನ್ಸ್ ವರದಿ ಪ್ರಕಾರ, ಬೆಂಗಳೂರಿನಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 43, 750 ರೂಪಾಯಿಯಾಗಿದ್ದು, ಗುರುವಾರಕ್ಕಿಂತ 600 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 47, 730 ರೂ. ಆಗಿದ್ದು, ನಿನ್ನೆಗಿಂತ(ಫೆ.04) 650 ರೂಪಾಯಿ ಇಳಿಕೆಯಾಗಿದೆ.
ಮುಂಬೈನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 46, 600 ಹಾಗೂ 24 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 47, 600 ರೂಪಾಯಿ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 46, 500 ರೂಪಾಯಿ, 24 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 50, 730 ರೂಪಾಯಿ.
ಬೆಳ್ಳಿ ಬೆಲೆಯಲ್ಲಿ ಪ್ರತಿ ಹತ್ತು ಗ್ರಾಂಗೆ ಹತ್ತು ರೂಪಾಯಿಯಂತೆ ಇಳಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿಗೆ 680 ರೂಪಾಯಿ, ಪ್ರಮುಖ ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 68,000 ರೂಪಾಯಿ ಎಂದು ವರದಿ ತಿಳಿಸಿದೆ.